ಹೈಬ್ರಿಡ್ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

Public TV
1 Min Read
Terrorist 1

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಲಷ್ಕರ್ ಎ ತೊಯ್ಬಾದ ಹೈಬ್ರಿಡ್ ಉಗ್ರನನ್ನು ಭದ್ರತಾ ಪಡೆಗಳು ಬಂಧಿವೆ.

ಖಚಿತ ಮಾಹಿತಿಯ ಮೇರೆಗೆ ಶ್ರೀನಗರ ಪೊಲೀಸರು ಹಾಗೂ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗು ತಾಣದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಎಲ್‍ಇಟಿಯ ಹೈಬ್ರಿಡ್ ಉಗ್ರ ಅರ್ಷಿದ್ ಅಹ್ಮದ್ ಭಟ್‍ನನ್ನು ಬಂಧಿಸಲಾಗಿದೆ. ಈ ಬಗ್ಗೆ ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಬೆಲೆ ಏರಿಕೆ ಬಿಕ್ಕಟ್ಟು – ಚೀನಾ ವಿರುದ್ಧ ಕಿಡಿ

ಘಟನೆಯಲ್ಲಿ ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರಗಳನ್ನು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 5 ಪಿಸ್ತೂಲ್‍ಗಳು, 50 ಪಿಸ್ತೂಲ್ ರೌಂಡ್‍ಗಳು ಹಾಗೂ 2 ಹ್ಯಾಂಡ್ ಗ್ರೆನೇಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗಲ್ಲು ಶಿಕ್ಷೆಯಿಂದ ಅತ್ಯಾಚಾರ ಸಂತ್ರಸ್ತೆಯರ ಹತ್ಯೆ ಹೆಚ್ಚಳ: ಕ್ಷಮೆ ಯಾಚಿಸುವಂತೆ ಗೆಹ್ಲೋಟ್‌ಗೆ ಬಿಜೆಪಿ ಒತ್ತಾಯ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *