ಹೈದರಾಬಾದ್: ಮುಸ್ಲಿಂ ಮಹಿಳೆಯರಿಗೆ ಬುರ್ಖಾ ತೆಗೆದು ವೋಟರ್ ಐಡಿ ತೋರಿಸುವಂತೆ ಒತ್ತಡ ಹೇರಿದ್ದಕ್ಕಾಗಿ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ (Madhavi Latha) ವಿರುದ್ಧ ಪ್ರಕರಣ ದಾಖಲಾಗಿದೆ.
ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ (Loksabha Elections 2024) ಸ್ಪರ್ಧಿಸುತ್ತಿರುವ ಮಾಧವಿ ಲತಾ ಅವರು ಸೋಮವಾರ ಮತದಾನ ಕೇಂದ್ರದಲ್ಲಿ ಮುಸ್ಲಿಂ ಮಹಿಳೆಯರ ಬಳಿ ಹೋಗಿ ಬುರ್ಖಾ ತೆಗೆಯುವಂತೆ ಹೇಳುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ವಿವಾದ ಸೃಷ್ಟಿಸಿತ್ತು.
Advertisement
#WATCH | Telangana: BJP candidate from Hyderabad Lok Sabha constituency, Madhavi Latha visits a polling booth in the constituency. Voting for the fourth phase of #LokSabhaElections2024 is underway. pic.twitter.com/BlsQXRn80C
— ANI (@ANI) May 13, 2024
Advertisement
ವೈರಲ್ ಆದ ವೀಡಿಯೊದಲ್ಲಿ, ಮಾಧವಿ ಲತಾ ಅವರು ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ಪರಿಶೀಲನೆಗಾಗಿ ತಮ್ಮ ಬುರ್ಖಾ ತೆಗೆಯುವಂತೆ ಹೇಳುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ನೀವು ಎಷ್ಟು ವರ್ಷಗಳ ಹಿಂದೆ ಇದನ್ನು (Voter ID) ಮಾಡಿದ್ದೀರಿ ಎಂದು ಇದೇ ವೇಳೆ ಮುಸ್ಲಿಂ ಮಹಿಳೆಯರನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಹೆಚ್ಚಿನ ಪರಿಶೀಲನೆಗಾಗಿ ಆಧಾರ್ ಕಾರ್ಡ್ (Adhar Card) ಕೂಡ ಕೊಡುವಂತೆ ಮನವಿ ಮಾಡಿದ್ದಾರೆ.
Advertisement
ಈ ದೃಶ್ಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯಿಸಿದ ಮಾಧವಿ ಲತಾ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಒಬ್ಬಳು ಅಭ್ಯರ್ಥಿಯಾಗಿದ್ದು, ಕಾನೂನಿನ ಪ್ರಕಾರ ಮುಖಕ್ಕೆ ಮಾಸ್ಕ್ ಇಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಇದೆ. ಮುಸ್ಲಿಂ ಮಹಿಳೆಯರ ಬಳಿ ತಮ್ಮ ಬುರ್ಖಾವನ್ನು ತೆಗೆಯುವಂತೆ ಕೇಳುವುದು ದೊಡ್ಡ ವಿಷಯವಲ್ಲ, ಏಕೆಂದರೆ ನಾನು ಪರುಷ ಅಲ್ಲ, ತಾನೂ ಮಹಿಳೆಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.
Advertisement
ದಯವಿಟ್ಟು ನಾನು ಐಡಿ ಕಾರ್ಡ್‌ಗಳನ್ನು ನೋಡಿ ಮತ್ತು ಪರಿಶೀಲಿಸಬಹುದೇ ಎಂದು ತುಂಬಾ ವಿನಮ್ರತೆಯಿಂದ ಅವರಲ್ಲಿ ವಿನಂತಿಸಿದ್ದೇನೆ. ಆದರೆ ಯಾರಿಗಾದರೂ ಅದನ್ನು ದೊಡ್ಡ ಸಮಸ್ಯೆಯನ್ನು ಮಾಡಬೇಕು ಎಂದು ಬಯಸಿದರೆ, ಅವರಿಗೆ ಭಯವಿದೆ ಎಂದು ಅರ್ಥ ಅಂತಾ ಮಾಧವಿ ಲತಾ ತಿಳಿಸಿದ್ದಾರೆ. ಇತ್ತ ವೀಡಿಯೋ ವೈರಲ್ ಆಗುತ್ತಾ ವಿವಾದವಾಗುತ್ತಿದ್ದಂತೆಯೇ ಮಾಧವಿ ಲತಾ ವಿರುದ್ಧ ಮಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧರೆಗುರುಳಿದ ಬೃಹತ್ ಬಿಲ್ ಬೋರ್ಡ್- ಸಾವಿನ ಸಂಖ್ಯೆ 14ಕ್ಕೆ ಏರಿಕೆ
#WATCH | Telangana: BJP Lok Sabha candidate from Hyderabad, Madhavi Latha staged a protest in front of the polling booth to open the gate.
She alleges that some people inside the polling booth at Jamal Colony, Riyasat Nagar of Santosh Nagar Police station limits, to rig the… pic.twitter.com/OpXPzPV55R
— ANI (@ANI) May 13, 2024
ಈ ಹಿಂದೆ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿಯತ್ತ ಬಾಣ ಬಿಡುವ ಕ್ರಿಯೆಯನ್ನು ಅನುಕರಿಸುವ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮಾಧವಿ ಲತಾ ಅವರು ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಇದೀಗ ಮಾಧವಿ ಲತಾ ವಿರುದ್ಧ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳನ್ನು ತಿಳಿಸುವ 295A ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಮಾಧವಿ ಲತಾ ಅವರು ಹೈದರಾಬಾದ್‌ನ ಹಾಲಿ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಹಿರಿಯ ಬಿಆರ್‌ಎಸ್ ನಾಯಕ ಗದ್ದಂ ಶ್ರೀನಿವಾಸ್ ಯಾದವ್ ವಿರುದ್ಧ ಕಣಕ್ಕಿಳಿದಿದ್ದಾರೆ.