ಹೈದರಾಬಾದ್: ಫ್ರಾಂಕ್ಫರ್ಟ್ (Frankfurt) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಲುಫ್ತಾನ್ಸಾ ಏರ್ಲೈನ್ಸ್ನ (Lufthansa Airlines) ಬೋಯಿಂಗ್ 787-9 ಡ್ರೀಮ್ಲೈನರ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇದರಿಂದ ಹಾರಾಟ ಆರಂಭಿಸಿದ ಸ್ವಲ್ಪ ಸಮಯದಲ್ಲೇ ಮರಳಿ, ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದೆ.
ಬಾಂಬ್ ಬೆದರಿಕೆ ಮೇಲ್ ಬಂದ ಕಾರಣದಿಂದ ವಿಮಾನವು ಹಾರಾಟದ ಮಧ್ಯೆ, ಫ್ರಾಂಕ್ಫರ್ಟ್ ವಿಮಾನ ನಿಲ್ದಾಣಕ್ಕೆ (Frankfurt Airport) ವಾಪಸ್ ಆಗಿದೆ ಎಂದು ಲುಫ್ತಾನ್ಸಾ ವಿಮಾನಯಾನ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಸೌದಿ ಏರ್ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ – ಟೈಯರ್ನಿಂದ ಚಿಮ್ಮಿದ ಬೆಂಕಿ ಕಿಡಿ, ಲಕ್ನೋದಲ್ಲಿ ತಪ್ಪಿದ ದುರಂತ
ಏನಾಗಿತ್ತು?
LH752 ಸಂಖ್ಯೆಯ ವಿಮಾನವು ಫ್ರಾಂಕ್ಫರ್ಟ್ ನಿಲ್ದಾಣದಿಂದ ಭಾನುವಾರ ಮಧ್ಯಾಹ್ನ 2.15ಕ್ಕೆ ಟೇಕಾಫ್ ಆಗಿತ್ತು. ಸೋಮವಾರ ಬೆಳಗ್ಗೆ 6 ಗಂಟೆಗೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಬೇಕಿತ್ತು. ವಿಮಾನ ಹಾರಾಟ ಮಧ್ಯದಲ್ಲೇ ಬಾಂಬ್ ಬೆದರಿಕೆ (Bomb Threat) ಮೇಲ್ ಬಂದಿತು. ವಿಮಾನವನ್ನು ಹೈದರಾಬಾದ್ನಲ್ಲಿ (Hyderabad Airport) ಲ್ಯಾಂಡಿಂಗ್ ಮಾಡಲು ಅನುಮತಿ ನಿರಾಕರಿಸಿದ ನಂತರ ಮರಳಿ ಫ್ರಾಂಕ್ಫರ್ಟ್ನಲ್ಲೇ ಸೇಫ್ ಲ್ಯಾಂಡಿಂಗ್ ಮಾಡಲಾಯಿತು. ಇದನ್ನೂ ಓದಿ: ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್ವೇಸ್ ಡ್ರೀಮ್ಲೈನರ್ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್ನಲ್ಲಿ ಲ್ಯಾಂಡಿಂಗ್!
ಸದ್ಯ ಫ್ರಾಂಕ್ಫರ್ಟ್ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಪ್ರಯಾಣಿಕರು ಇಂದು ಹೈದರಾಬಾದ್ಗೆ ಪ್ರಯಾಣ ಮುಂದುವರಿಸಲಿದ್ದಾರೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ