ಹೈದರಾಬಾದ್: 50 ವರ್ಷದ ರೋಗಿಯ ದೇಹದಿಂದ 156 ಕಿಡ್ನಿ ಸ್ಟೋನ್ಸ್ ಅನ್ನು ಹೈದರಾಬಾದ್ ವೈದ್ಯರು ಹೊರ ತೆಗೆದಿದ್ದಾರೆ.
ಪ್ರಮುಖ ಆಸ್ಪತ್ರೆಯ ವೈದ್ಯರು 50 ವರ್ಷದ ರೋಗಿಯಿಂದ ಲ್ಯಾಪರೊಸ್ಕೋಪಿ ಮತ್ತು ಎಂಡೋಸ್ಕೋಪಿಯನ್ನು ಬಳಸಿ 156 ಕಿಡ್ನಿ ಸ್ಟೋನ್ಸ್ ಗಳನ್ನು ಹೊರತೆಗೆದಿದ್ದಾರೆ. ಈ ಆಪರೇಷನ್ ಸುಮಾರು ಮೂರು ಗಂಟೆಗಳ ಕಾಲ ನಡೆದಿದ್ದು, ರೋಗಿಯು ಈಗ ಆರೋಗ್ಯವಾಗಿದ್ದಾರೆ.
Advertisement
Advertisement
ಹುಬ್ಬಳ್ಳಿ ನಿವಾಸಿಯಾಗಿರುವ ಶಾಲಾ ಶಿಕ್ಷಕ ಬಸವರಾಜ್ ಮಡಿವಾಳರ್ ಅವರ ಹೊಟ್ಟೆ ಬಳಿ ಹಠಾತ್ ಆಗಿ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಆಗ ಅವರಿಗೆ ಸ್ಕ್ರೀನಿಂಗ್ ಗುಂಪು ಇರುವುದು ವೈದ್ಯರಿಗೆ ತಿಳಿದುಬಂದಿದೆ. ಈ ಹಿನ್ನೆಲೆ ಅವರು ಹೈದರಾಬಾದ್ ಗೆ ಹೋಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದು, ಯಶಸ್ವಿಯಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ವಿದ್ಯಾರ್ಥಿ ಸಾವು – ನುಚ್ಚು ನೂರಾದ ಮೆಡಿಕಲ್ ಕನಸು
Advertisement
Advertisement
ಆಸ್ಪತ್ರೆಯ ಮೂತ್ರಶಾಸ್ತ್ರಜ್ಞ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಚಂದ್ರ ಮೋಹನ್ ಈ ಕುರಿತು ಮಾತನಾಡಿದ್ದು, ರೋಗಿಯ ಮೂತ್ರಪಿಂಡದಲ್ಲಿ ಸಮಸ್ಯೆ ಇತ್ತು. ಹೊಟ್ಟೆಯ ಸಮೀಪವೇ ಸ್ಟೋನ್ಸ್ ತೆಗೆಯುವುದು ನಮಗೆ ಸವಾಲಿನ ಕೆಲಸವಾಗಿತ್ತು ಎಂದು ತಿಳಿಸಿದರು.
ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಈ ರೋಗಿಯು ಕಿಡ್ನಿ ಸ್ಟೋನ್ಸ್ ಸಮಸ್ಯೆಯಿಂದ ಬಳಲುತ್ತಿದ್ದು, ಬರುಬರುತ್ತಾ ಈ ಕಲ್ಲುಗಳು ಬೆಳೆಯುತ್ತಾ ಹೋಗಿದೆ. ಆದರೆ ಇವರು ಈ ಹಿಂದೆ ಯಾವುದೇ ರೋಗಲಕ್ಷಣಗಳನ್ನು ಅನುಭವಿಸಿರಲಿಲ್ಲ. ಆದರೆ ಅವರಿಗೆ ಹಠಾತ್ ನೇ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಎಲ್ಲಾ ಅಗತ್ಯ ಪರೀಕ್ಷೆಗಳನ್ನು ಮಾಡಲಾಗಿದೆ. ಮೂತ್ರಪಿಂಡದ ಕಲ್ಲುಗಳ ಸಮಸ್ಯೆ ಪತ್ತೆಯಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕನ್ನಡ ಧ್ವಜ ಸುಟ್ಟ ದ್ರೋಹಿಗಳ ವಿರುದ್ಧ ಆಕ್ರೋಶ: ಪಕ್ಷಬೇಧ ಮರೆತು ಖಂಡನಾ ನಿರ್ಣಯ