ಹೈದರಾಬಾದ್: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಪ್ರಣಯ್ ಪತ್ನಿ ಅಮೃತಾ ಅವರು ಗಂಡು ಮಗುವಿಗೆ ಗುರುವಾರ ಜನ್ಮ ನೀಡಿದ್ದಾರೆ.
ಅಮೃತಾ ಅವರನ್ನು ಅತ್ತೆ ಆಸ್ಪತ್ರೆಗೆ ದಾಖಲಿಸಿ, ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನು ಓದಿ: ಪ್ರಣಯ್ ಕೊಲೆ: ಆರೋಪಿಗಳ ಜಾಮೀನು ತಿರಸ್ಕಾರ
Advertisement
ಪ್ರಣಯ್ ಮತ್ತು ಅಮೃತಾ ಇಬ್ಬರು ಪ್ರೀತಿಸಿದ್ದು, ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರು ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದರೆ 2018 ಸೆಪ್ಟಂಬರ್ 14ರಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ಆದರೆ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಬರೋಬ್ಬರಿ ಒಂದು ಕೋಟಿ ಹಣವನ್ನು ಹಂತಕರಿಗೆ ನೀಡಿದ್ದ ವಿಚಾರ ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
Advertisement
Advertisement
ಮರ್ಯಾದಾ ಹತ್ಯೆಗೆ ಬಲಿಯಾದ ಪ್ರಣಯ್ ಕುಟುಂಬದವರಿಗೆ ರಾಜ್ಯ ಸರ್ಕಾರವೂ ಪರಿಹಾರ ಧನವನ್ನು ಫೋಷಿಸಿತ್ತು. ಕೆಲವು ದಿನಗಳ ಬಳಿಕ ಮೃತ ಪ್ರಣಯ್ ಪತ್ನಿ ಅಮೃತಾಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಕೂಡ ಭರವಸೆ ನೀಡಿತ್ತು.
Advertisement
ತೆಲಂಗಾಣ ಪರಿಶಿಷ್ಟ ಜಾತಿ ಅಭಿವೃದ್ಧಿ ಸಚಿವ ಜಿ. ಜಗದೀಶ್ ರೆಡ್ಡಿ ಅವರು ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ಮೃತ ಪ್ರಣಯ್ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು. ಮೃತ ಪ್ರಣಯ್ ಪತ್ನಿ ಅಮೃತ ವರ್ಶಿನಿ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು. ಜೊತೆಗೆ ಕೃಷಿ ಭೂಮಿ ಮತ್ತು ಡಬಲ್ ಬೆಡ್ ರೂಮ್ ಮನೆಯನ್ನು ಅವರ ಕುಟುಂಬಕ್ಕೆ ನೀಡುತ್ತೇವೆ. ಈಗಾಗಲೇ ಪ್ರಣಯ್ ಕುಟುಂಬದವರಿಗೆ ತಕ್ಷಣದ ವೆಚ್ಚಕ್ಕಾಗಿ ಸರ್ಕಾರ 8.25 ಲಕ್ಷ ರೂ. ಅನುಮೋದಿಸಿದೆ. ಇದರ ಜೊತೆ ನಾನು ವೈಯಕ್ತಿಕವಾಗಿ ಅಮೃತಾಗೆ 4.12 ಲಕ್ಷ ರೂ. ಚೆಕ್ ನೀಡಿದ್ದೇನೆ ಎಂದು ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv