ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಪೋಸ್ಟ್ ಹಾಕಿದ್ದ ಆರೋಪದಡಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನಂತರ ಬಿಟ್ಟು ಕಳುಹಿಸಿದ್ದಾರೆ.
ಅಬ್ದುಲ್ ಮಜೀದ್ ಬಂಧಿತ ಆರೋಪಿ. ಈತನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಯಿತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದ. ಇದನ್ನೂ ಓದಿ: ಮೊಬೈಲ್‍ನಲ್ಲಿ ಗೇಮ್ ಆಡೋದು ಬಿಟ್ಟು, ಕೆಲಸ ಹುಡುಕು ಎಂದಿದ್ದಕ್ಕೆ ಅತ್ತಿಗೆಯನ್ನೇ ಕೊಂದ
Advertisement
Advertisement
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಹೈದರಾಬಾದ್‌ನ ಮೊಘಲ್‌ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್‌ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ಹಯ್ಯಾ ಲಾಲ್ ಕುಟುಂಬಕ್ಕೆ ನೆರವು – 24 ಗಂಟೆಯಲ್ಲಿ ಬಂತು 1 ಕೋಟಿ
Advertisement
ಅದರಂತೆ ಅಬ್ದುಲ್ ಮಜೀದ್‌ಗೆ ನೋಟಿಸ್ ಜಾರಿ ಮಾಡಿದ್ದು, ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.