ಹೈದರಾಬಾದ್: ತನ್ನ ಸ್ನೇಹಿತ ವಿಡಿಯೋ ಕಾಲ್ ಮಾಡಿದ್ದ ಸಂದರ್ಭದಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳು ಹಾಸ್ಟೇಲಿನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕೊಂಪಲ್ಲಿಯಲ್ಲಿ ನಡೆದಿದೆ.
24 ವರ್ಷದ ಬಿ. ಹನೀಶಾ ಚೌಧರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಶಿವಶಿವನಿ ಇನ್ಸ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.
ಏನಿದು ಘಟನೆ?: ಭಾನುವಾರ ಬೆಳಗ್ಗೆ ಹನೀಶಾಳಿಗೆ ದೀಕ್ಷಿತ್ ಪಟೇಲ್ ಗೆ ವಿಡಿಯೋ ಕಾಲ್ ಮಾಡಿದ್ದನು. ಈ ವೇಳೆ ಅವರಿಬ್ಬರ ಮಧ್ಯೆ ನಡೆದ ಮಾತುಕತೆ ತಾರಕಕ್ಕೇರಿದೆ. ಬಳಿಕ ಹನೀಶಾ ತನ್ನ ರೂಮ್ ನಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ದೀಕ್ಷಿತ್ ಪಟೇಲ್ ಆಕೆಯ ಹಾಸ್ಟೆಲ್ ಗೆ ಹೋಗಿ ಬಾಗಿಲು ಮುರಿದು ಆಕೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಡಿಯೋ ಕಾಲ್ ಮಾಡಿದ್ದ ಸಂದರ್ಭದಲ್ಲಿಯೇ ಹನೀಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಂತ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಆದ್ರೆ ಆಕೆ ಆತ್ಮಹತ್ಯೆಗೆ ಶರಣಾಗುವ ಮುನ್ನ ಆಕೆಯ ಬಾಯ್ ಫ್ರೆಂಡ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾಳೆ. ಅಲ್ಲದೇ ಹನೀಶಾ ಆತ್ಮಹತ್ಯೆಗೆ ಶರಣಾಗುವುದನ್ನು ಆಕೆಯ ಫ್ರೆಂಡ್ ನೋಡಿರುವುದಾಗಿ ಹೇಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹನೀಶಾ ಚೌಧರಿ ಮೂಲತಃ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯವರಾಗಿದ್ದು, ಅನಂತಪು ಹೈದರಾಬಾದ್‍ನಿಂದ ಸುಮಾರು 350 ಕಿ.ಮೀ. ದೂರದಲ್ಲಿದೆ. ಆದ್ದರಿಂದ ಹೈದರಾಬಾದ್‍ನ ಕೊಂಪಲ್ಲಿಯ ಖಾಸಗಿ ಹಾಸ್ಟೆಲ್ ನಲ್ಲಿ ವಾಸವಿದ್ದರು.
ಹನೀಶಾಳನ್ನು ದೀಕ್ಷಿತ್ ಮದುವೆ ಕಾರ್ಯಕ್ರಮಕ್ಕೆ ಹೋಗಲು ಬಿಡದೇ ಇರುವುದಕ್ಕೆ ಅವರಿಬ್ಬರ ಮಧ್ಯೆ ವಾಗ್ವಾದ ನಡೆದಿದ್ದೇ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಚೌಧರಿ ಪೋಷಕರು ದೂರು ನೀಡಿದ್ದಾರೆ. ಸದ್ಯ ಹನೀಶಾ ಫೋನನ್ನು ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ತನಿಖೆ ಮುಂದುವರೆಸಿದ್ದಾರೆ.