ಹೈದರಾಬಾದ್: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ (Student) ತರಗತಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಗರದ ಕಾಲೇಜೊಂದರಲ್ಲಿ ಮಂಗಳವಾರ ನಡೆದಿದೆ.
ಸ್ಪರ್ಧಾತ್ಮಕ ಪರೀಕ್ಷಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿ ರಾತ್ರಿ 10 ಗಂಟೆಯ ನಂತರ ಕಣ್ಮರೆಯಾಗಿದ್ದ. ಶಾಲಾ ಕಟ್ಟಡದ ಎಲ್ಲಾ ಕೊಠಡಿಗಳಲ್ಲಿ ತೀವ್ರ ಶೋಧ ನಡೆಸಿದಾಗ ಆತನ ಮೃತದೇಹ ಪತ್ತೆಯಾಗಿತ್ತು. ವಿದ್ಯಾರ್ಥಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ
Advertisement
Advertisement
ತೆಲಂಗಾಣದಲ್ಲಿ (Telangana) ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಮುಂದುವರಿದಿದ್ದು ಪೋಷಕರು ಮತ್ತು ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಸ್ನೇಹಿತನೊಬ್ಬ ವೈಯಕ್ತಿಕ ಫೋಟೋಗಳನ್ನು ಸೋರಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಭಾನುವಾರ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ವಾರಂಗಲ್‍ನಲ್ಲಿ (Warangal) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.
Advertisement
Advertisement
ಕಳೆದ ಡಿಸೆಂಬರ್‍ನಲ್ಲಿ ಹಿರಿಯ ವಿದ್ಯಾರ್ಥಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ವಿದ್ಯಾರ್ಥಿನಿ ಭಾನುವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮತ್ತೊಂದು ಘಟನೆಯಲ್ಲಿ ಕಳೆದ ಶನಿವಾರ ನಿಜಾಮಾಬಾದ್‍ನ (Nizamabad) ಹಾಸ್ಟೆಲ್ ಕೋಣೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇತ್ತೀಚಿನ ಅಧಿಕೃತ ಅಂಕಿ ಅಂಶಗಳ ಪ್ರಕಾರ 2021ರಲ್ಲಿ ಭಾರತದ 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಎಎಪಿಗೆ ಗುಡ್‌ಬೈ; ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ