ಹೈದರಾಬಾದ್: ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಬಳಿಕ ಒಂದು ಮಗು ಸಾವನ್ನಪ್ಪಿದ್ದು, ಸುಮಾರು 26 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಧ್ರ ಪ್ರದೇಶದ ನಾಮ್‍ಪಲ್ಲಿಯಲ್ಲಿ ನಡೆದಿದೆ.
ಗುರುವಾರ ನಾಮ್‍ಪಲ್ಲಿಯಲ್ಲಿರುವ ಸಾರ್ವಜನಿಕರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳು ಲಸಿಕೆ ಹಾಕಿಸಿಕೊಂಡ ಬಳಿಕ ಅಸ್ವಸ್ಥರಾಗಿದ್ದಾರೆ. ಲಸಿಕೆ ಪಡೆದ ಮಕ್ಕಳಲ್ಲಿ 26 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಒಂದು ಗಂಡು ಮಗು ಮೃತಪಟ್ಟಿದೆ ಹಾಗೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಮಕ್ಕಳಿಗೆ ನೀಲೋಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಕ್ಕಳ ವಯಸ್ಸು ಹಾಗೂ ಇತರೇ ವಿವರಗಳನ್ನು ಮಾಧ್ಯಮಗಳಿಗೆ ನೀಡಲು ವೈದ್ಯರು ನಿರಾಕರಿಸಿದ್ದಾರೆ.
Advertisement
Advertisement
ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಇದಕ್ಕೇ ಲಸಿಕೆ ನೀಡಿದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ. ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Advertisement
ಅಲ್ಲದೆ ನಾಮ್‍ಪಲ್ಲಿ ಆರೋಗ್ಯ ಕೇಂದ್ರದಲ್ಲಿ ಯಾವೆಲ್ಲ ಮಕ್ಕಳಿಗೆ ಲಸಿಕೆ ಹಾಕಲಾಗಿತ್ತೋ, ಎಲ್ಲಾ ಮಕ್ಕಳ ಪೋಷಕರಿಗೆ ಅವರನ್ನು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆಂದು ಕರೆತರಲು ಸೂಚಿಸಲಾಗಿದೆ. ಅಲ್ಲದೆ ಘಟನೆ ನಡೆದ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಇದಕ್ಕೆ ಸಂಬಂಧ ಪಟ್ಟವರ ಮೇಲೂ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv