ಹೈದರಾಬಾದ್: ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ನಡೆದ ದಿಶಾ ಪ್ರಕರಣ ಅತ್ಯಚಾರಿಗಳ ಎನ್‌ಕೌಂಟರ್‌ನನ್ನು 2008ರಲ್ಲಿ ವಾರಂಗಲ್ ಆ್ಯಸಿಡ್ ಪ್ರಕರಣದ ಎನ್‌ಕೌಂಟರ್‌ಗೆ ಹೋಲಿಸಲಾಗುತ್ತಿದೆ. ಇದೇ ಮಾದರಿಯಲ್ಲೇ ಈ ಹಿಂದೆ ಸಜ್ಜನರ್ ಅವರ ತಂಡ ಆ್ಯಸಿಡ್ ದಾಳಿ ಆರೋಪಿಗಳನ್ನು ಕೂಡ ಎನ್‍ಕೌಂಟರ್ ಮಾಡಿತ್ತು.
ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈದರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಲಾಗಿದೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ
Advertisement
Advertisement
ಈ ಹಿಂದೆ 2008ರ ಡಿಸೆಂಬರ್ 13ರಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಬ್ಬರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣ ಇಡೀ ಆಂಧ್ರಪ್ರದೇಶವನ್ನು ಬೆಚ್ಚಿಬೀಳಿಸಿತ್ತು. ಆ ಪ್ರಕರಣದ ಮೂವರು ಆರೋಪಿಗಳನ್ನು ಕೂಡ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ
Advertisement
ವಾರಂಗಲ್‍ನ ಕಾಕತೀಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸ್ವಪ್ನಿಕ ಮತ್ತು ಪ್ರಣೀತಾ ಲವ್ ಪ್ರೊಪೊಸಲ್‍ಗೆ ಒಪ್ಪಿಕೊಳ್ಳದೆ ನಿರಾಕರಿಸಿದ್ದಕ್ಕೆ ಶ್ರೀನಿವಾಸ್(25), ಹರಿಕೃಷ್ಣಾ(24) ಮತ್ತು ಸಂಜತ್(22) ಆ್ಯಸಿಡ್ ದಾಳಿ ನಡೆಸಿದ್ದರು. ಇಬ್ಬರು ವಿದ್ಯಾರ್ಥಿನಿಯರು ತರಗತಿ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಅವರ ಮೇಲೆ ಆರೋಪಿಗಳು ಆ್ಯಸಿಡ್ ಎರಚಿದ್ದರು.
Advertisement
ಈ ಪ್ರಕರಣ ನಡೆದಿದ್ದಾಗ ವಿಶ್ವನಾಥ್ ಸಜ್ಜನರ್ ಅವರು ವಾರಂಗಲ್ ಎಸ್‍ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ವಿಶ್ವನಾಥ್ ನೇತೃತ್ವದ ತಂಡ ಘಟನೆಯಾದ 48 ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿತ್ತು. ದಿಶಾ ಪ್ರಕರಣ ಆರೋಪಿಗಳನ್ನು ಘಟನಾ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದಂತೆ ಬಂಧನವಾದ ಮರುದಿನ ಸಾಕ್ಷಿಗಳನ್ನು ಸಂಗ್ರಹಿಸಲು ಆ್ಯಸಿಡ್ ದಾಳಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ
ಈ ವೇಳೆ ಓರ್ವ ಆರೋಪಿ ಪೊಲೀಸರ ಮೇಲೆ ಕಚ್ಚಾ ಬಾಂಬ್‍ನಿಂದ ದಾಳಿ ಮಾಡಲು ಮುಂದಾಗಿದ್ದನು. ಆಗ ಆತ್ಮರಕ್ಷಣೆಗಾಗಿ ಸಜ್ಜನರ್ ಅವರು ತಮ್ಮ ಜೊತೆಗಿದ್ದ ಪೊಲೀಸರಿಗೆ ಎನ್‍ಕೌಂಟರ್ ಮಾಡಲು ಆದೇಶಿಸಿದ್ದರು. ಈ ವೇಳೆ ಮೂವರು ಆರೋಪಿಗಳು ಖಾಕಿ ಗುಂಡೇಟಿಗೆ ಬಲಿಯಾಗಿದ್ದರು.
ವಾರಂಗಲ್ ಎನ್‍ಕೌಂಟರ್ ಬಳಿಕ ಸಜ್ಜನರ್ ಅವರು `ಎನ್‍ಕೌಂಟರ್ ಸ್ಪೆಷಲಿಸ್ಟ್’ ಆಗಿಬಿಟ್ಟರು. ಆ್ಯಸಿಡ್ ದಾಳಿ ನಡೆದ 48 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ, ಒಂದೆ ದಿನದಲ್ಲಿ ದುಷ್ಟರಿಗೆ ಸಜ್ಜನರ್ ತಕ್ಕ ಪಾಠ ಕಲಿಸಿದ್ದರು. ಅದರಂತೆ ದಿಶಾ ಪ್ರಕರಣ ಸಂಬಂಧ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆ ಸಜ್ಜನರ್ ಅವರ ತಂಡ ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದೆ. ಹೀಗೆ ಈ ಎರಡು ಪ್ರಕರಣದ ಎನ್‍ಕೌಂಟರ್ ಒಂದೇ ಮಾದರಿಯಲ್ಲಿ ನಡೆದಿದೆ.
ಈ ಹಿಂದೆ ವಾರಂಗಲ್ ಆ್ಯಸಿಡ್ ಪ್ರಕರಣ ಆರೋಪಿಗಳನ್ನು ಸಜ್ಜನರ್ ಎನ್‍ಕೌಂಟರ್ ಮಾಡಿದ್ದಾಗ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರು, ಸ್ನೇಹಿತರು ಹಾಗೂ ಸಾರ್ವಜನಿಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳು ಇಡೀ ಕಾಲೇಜಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಆ ಖುಷಿಯ ವಾತಾವರಣ ಇಂದು ಕೂಡ ಎಲ್ಲೆಡೆ ಮನೆ ಮಾಡಿದೆ. ದಿಶಾ ಪ್ರಕರಣದ ಅತ್ಯಚಾರಿಗಳನ್ನು ಸಜ್ಜನರ್ ಅವರ ತಂಡ ಎನ್‍ಕೌಂಟರ್ ಮಾಡಿರುವುದಕ್ಕೆ ದೇಶದ ಜನರು ಪೊಲೀಸರಿಗೆ ಭೇಷ್ ಎನ್ನುತ್ತಿದ್ದಾರೆ.