ಹೈದರಾಬಾದ್/ಕ್ಯಾನ್ಬೆರಾ: ಆಸ್ಟ್ರೇಲಿಯಾದ (Australia) ವಿಕ್ಟೋರಿಯಾದ ಬಕ್ಲಿಯಲ್ಲಿ ರಸ್ತೆ ಬದಿಯ ಡಬ್ಬಿಯೊಂದರಲ್ಲಿ ಹೈದರಾಬಾದ್ (Hyderabad) ಮೂಲದ ಮಹಿಳೆಯೊಬ್ಬಳ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚೈತನ್ಯ ಮದಗಣಿ (Chaithanya Madhagani) ಅಲಿಯಾಸ್ ಶ್ವೇತಾ ಎಂದು ಗುರುತಿಸಲಾಗಿದೆ.
ಮಹಿಳೆ ಪತಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು. ಇದೀಗ ಪತಿಯೇ ಮಹಿಳೆಯನ್ನು ಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶ್ವೇತಾಳನ್ನು ಹತ್ಯೆಗೈದ ಬಳಿಕ ಪುತ್ರನೊಂದಿಗೆ ಹೈದರಾಬಾದ್‍ಗೆ ಬಂದಿರಬಹುದು ಎಂದು ವರದಿಯಾಗಿದೆ. ಇದನ್ನೂ ಓದಿ: ಕಾರಿನಲ್ಲಿ ಮಲಗಿದ್ದ ವ್ಯಾಪಾರಿ; ಆಚೆಗೆಳೆದು 35 ಸುತ್ತು ಗುಂಡು ಹಾರಿಸಿ ಕೊಂದ ದುರುಳರು!
Advertisement
Advertisement
ಮಹಿಳೆಯ ಪೋಷಕರ ಕೋರಿಕೆಯ ಮೇರೆಗೆ ಆಕೆಯ ಮೃತದೇಹವನ್ನು ಹೈದರಾಬಾದ್‍ಗೆ ತರಲು ವಿದೇಶಾಂಗ ಕಚೇರಿಗೆ ಸ್ಥಳೀಯ ಶಾಸಕರು ಪತ್ರ ಬರೆದಿದ್ದಾರೆ. ಅಲ್ಲದೇ ಮಹಿಳೆಯ ಪೋಷಕರು ನೀಡಿದ ಮಾಹಿತಿಯ ಪ್ರಕಾರ, ಅವರ ಅಳಿಯನೇ ತಮ್ಮ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
ಮಹಿಳೆಯ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿಕ್ಟೋರಿಯಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಾಗಲ್ ಪ್ರೇಮಿಯಿಂದ ಯುವತಿಯ ಕಿಡ್ನ್ಯಾಪ್ – ಪೊಲೀಸರಿಂದ ರಕ್ಷಣೆ