ಹೈದರಾಬಾದ್: ವಿಶ್ವಕಪ್ (ODI World Cup) ಆರಂಭಕ್ಕೂ ಮುನ್ನ ನಡೆದಿರುವ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಪಾಕಿಸ್ತಾನ (Pakistan) ಸೋಲು ಕಂಡಿದೆ. ಈ ಬಗ್ಗೆ ಪಾಕ್ ತಂಡದ ಉಪನಾಯಕ ಶಾದಾಬ್ ಖಾನ್ (Shadab Khan), ನಾವು ಪ್ರತಿದಿನ ಹೈದರಾಬಾದ್ ಬಿರಿಯಾನಿ ತಿನ್ನುತ್ತಿದ್ದೇವೆ. ಅದಕ್ಕೆ ಸ್ಲೋ ಆಗಿದ್ದೇವೆ ಎಂದು ತಮಾಷೆಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ಬಳಿಕ ಖಾನ್ ಮಾತನಾಡಿದ್ದಾರೆ. ನಾವು ಭಾರತಕ್ಕೆ ಏಳು ವರ್ಷಗಳ ಬಳಿಕ ಬಂದಿದ್ದೇವೆ. ನಮ್ಮ ತಂಡ ಹೈದರಾಬಾದ್‍ಗೆ ಆಗಮಿಸಿ ಒಂದು ವಾರ ಕಳೆದಿದೆ. ಇಲ್ಲಿ ಬಂದ ಮೇಲೆ ಇಲ್ಲಿನ ಬಿರಿಯಾನಿಯನ್ನು ಯಾಕೆ ರುಚಿ ನೋಡಬಾರದು ಎಂದು ಪ್ರತಿದಿನ ಬಿರಿಯಾನಿ ತಿನ್ನುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ ಮಹಿ ನ್ಯೂ ಲುಕ್; ಯಾರಿದು ಹೀರೋ ಅಂತಿದ್ದಾರೆ ಫ್ಯಾನ್ಸ್
Advertisement
Advertisement
ಮಂಗಳವಾರ ಹೈದರಾಬಾದ್‍ನ ಉಪ್ಪಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ 15 ರನ್‍ಗಳಿಂದ ಸೋಲು ಕಂಡಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಸೋತಿತ್ತು. ಇದೇ ವಿಚಾರದ ಬಗ್ಗೆ ಪ್ರತಿಕ್ರಿಸಿರುವ ಶಾಬಾದ್ ಖಾನ್, ಹೈದರಾಬಾದಿ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ ಆಗಿದ್ದೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
Advertisement
Advertisement
ಎರಡೂ ಅಭ್ಯಾಸ ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ವಿಶ್ವಕಪ್‍ನಲ್ಲಿ ಶುಭಾರಂಭ ಮಾಡಲು ಕಾಯುತ್ತಿದೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಎರಡೂ ಪಂದ್ಯಗಳಲ್ಲಿ ಪಾಕಿಸ್ತಾನ 300ಕ್ಕೂ ಅಧಿಕ ರನ್ ಗಳಿಸಿತ್ತು. ಆಸ್ಟ್ರೇಲಿಯಾ ವಿರುದ್ಧದ 352 ರನ್‍ಗಳ ಗುರಿ ಬೆನ್ನಟ್ಟಿದಾಗ ಅಂತಿಮವಾಗಿ 337 ರನ್‍ಗಳಿಗೆ ಆಲೌಟ್ ಆಗಿತ್ತು.
ಐಸಿಸಿ ಏಕದಿನ ವಿಶ್ವಕಪ್‍ಗೆ ಕ್ಷಣಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ 10 ತಂಡಗಳು ಪೈಪೋಟಿ ನಡೆಸಲು ಎಲ್ಲಾ ರೀತಿಯಲ್ಲಿ ಸಜ್ಜಾಗಿವೆ. ಗುರುವಾರ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಕ್ಟೋಬರ್ 6 ರಂದು ಪಾಕಿಸ್ತಾನ ತಂಡ ನೆದರ್‌ಲ್ಯಾಂಡ್ಸ್ ವಿರುದ್ಧ ಹೈದರಾಬಾದ್‍ನ ಉಪ್ಪಲ್ ಸ್ಟೇಡಿಯಂನಲ್ಲೇ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇದನ್ನೂ ಓದಿ: Asian Games 2023: ಚೊಚ್ಚಲ ಅಂತಾರಾಷ್ಟ್ರೀಯ T20 ಶತಕ ಸಿಡಿಸಿ ಗಿಲ್ ದಾಖಲೆ ಮುರಿದ ಯಶಸ್ವಿ
Web Stories