ನವದೆಹಲಿ: 6 ಮಂದಿ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ವೇಳೆ ದೆಹಲಿ ಮಹಾನಗರ ಪಾಲಿಕೆಯಲ್ಲಿ ಹೈಡ್ರಾಮಾ ನಡೆದಿದ್ದು ಬಿಜೆಪಿ (BJP) ಮತ್ತು ಆಮ್ ಆದ್ಮಿ (AAP) ಕೌನ್ಸಿಲರ್ಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮೇಯರ್ ಆಯ್ಕೆ ಬಳಿಕ ನಡೆದ ಪ್ರಕ್ರಿಯೆಯಲ್ಲಿ ತಡ ರಾತ್ರಿವರೆಗೂ ಸದಸ್ಯರು ಸದನದಲ್ಲಿ ಗದ್ದಲ ಸೃಷ್ಟಿಸಿದ್ದಾರೆ.
ಮತದಾನದ ವೇಳೆ ಮೇಯರ್ ಶೆಲ್ಲಿ ಒಬೆರಾಯ್ ಸದಸ್ಯರಿಗೆ ಮತದಾನದ ವೇಳೆ ಫೋನ್ ಕೊಂಡೊಯ್ಯಲು ಅವಕಾಶ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕೌನ್ಸಿಲರ್ಗಳು ಮೊದಲು ಗಲಾಟೆ ಆರಂಭಿಸಿದರು. ಇದು ಸದನದಲ್ಲಿ ದೊಡ್ಡ ಗದ್ದಲಕ್ಕೆ ಕಾರಣವಾಯಿತು. ಸದಸ್ಯರು ಮತ ಪೆಟ್ಟಿಗೆಗಳನ್ನು ಸದನ ಬಾವಿಗೆ ಎಸೆದಿದ್ದು, ಪರಸ್ಪರ ಹಲ್ಲೆ ಮಾಡಿಕೊಂಡರು. ತೀವ್ರ ಗದ್ದಲ ಸೃಷ್ಟಿಯಾದ ಕಾರಣ 5 ಬಾರಿ ಕಲಾಪ ಮುಂದೂಡಿದ್ದ ಮೇಯರ್ ಅಂತಿಮವಾಗಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಲಾಪ ಮುಂದೂಡಿದರು. ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಪಂಜಾಬ್ ಆಪ್ ಶಾಸಕ ಬಂಧನ
Advertisement
Advertisement
ಮೇಯರ್ ಒಬೆರಾಯ್ ಪರ ಕೆಲವು ಸದಸ್ಯರು ಬಿಜೆಪಿ ಸದಸ್ಯರ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಇದಕ್ಕೆ ಪ್ರತಿಕ್ರಿಯಿಸಿ, ಇದು ಸಂಪೂರ್ಣವಾಗಿ ಆಘಾತಕಾರಿ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಸ್ಥಾಯಿ ಸಮಿತಿ ಚುನಾವಣೆ ನಡೆಯಲು ಬಿಜೆಪಿ ಅವಕಾಶ ನೀಡುತ್ತಿಲ್ಲ ಎಂದು ಎಎಪಿ ಶಾಸಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಇದನ್ನೂ ಓದಿ: ಪದೇ ಪದೇ ಯೋಗಿ ವಿರುದ್ಧ ಕೇಸ್ ಹಾಕುತ್ತಿದ್ದ ವ್ಯಕ್ತಿಗೆ 1 ಲಕ್ಷ ರೂ. ದಂಡ
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k