ಬೆಂಗಳೂರು: ಅಯೋಧ್ಯೆ ರಾಮಮಂದಿರ (Ayodhya Ram Mandir) ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ
Advertisement
Advertisement
ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.
Advertisement
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಹೈಕಮಾಂಡ್ (Congress High Command) ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?
Advertisement
ಇತ್ತೀಚೆಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತನ್ನ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಿತು. ಸಭೆಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟನೆ ಕೇಳಿದರು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ನಾಯಕರು ಭಾಗವಹಿಸಬಹುದಾಗಿ ತಿಳಿಸಿದೆ ಎಂದು ಹೇಳಲಾಗಿದೆ.