ನಟ, ಯುವರಾಜಕಾರಣಿ ನಟ ನಿಖಿಲ್ ಕುಮಾರ್ (Nikhil Kumar), ಕಾವೇರಿ (Cauvery) ನೀರು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿರೋ ನಿಖಿಲ್, ‘ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ ಎಂದು ಬರೆದುಕೊಂಡಿದ್ದಾರೆ.
ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿರುವ ನಿಖಿಲ್, ‘ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ಧ್ವನಿಯೇ ನನ್ನ ಧ್ವನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ ಎಂದು ನಿಖಿಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Web Stories