ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಾದರೆ ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಕಾಗವಾಡ (Kagawad) ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ(Raju Kage) ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಿರೂರ ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಯಾವುದೇ ಖಾತೆ ಕೊಟ್ಟರೂ ಸೂಕ್ತವಾಗಿ ನಿಭಾಯಿಸುವೆ ಎಂದರು.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ (Panchamasali Reservation) ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಎಲ್ಲ ಪಂಚಮಸಾಲಿ ಸಮುದಾಯದ ಶಾಸಕರು, ಸಚಿವರು ಮುಖ್ಯಮಂತ್ರಿಗಳನ್ನು ಭೇಟಿ ಆಗಲಿದ್ದೇವೆ. ಅಧಿವೇಶನದ ಸಮಯದಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಆಗುತ್ತೇವೆ. ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾಯಕರುಗಳು ಚರ್ಚಿಸಿ ಒಂದು ಹಂತಕ್ಕೆ ಬರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದವನ ವಿರುದ್ಧ ಸುಮೊಟೋ ಕೇಸ್
ಲಕ್ಷ್ಮಣ ಸವದಿ (Laxman Savadi) ಸಹ ಹಿರಿಯರಿದ್ದಾರೆ. ಈ ಹಿಂದೆ ಡಿಸಿಎಂ ಸ್ಥಾನವನ್ನು ನಿಭಾಯಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದರೆ ನನಗೂ ಸಂತೋಷವಿದೆ. ಹಾಸನದಲ್ಲಿ ಸಿದ್ರಾಮೋತ್ಸವ ಮಾದರಿಯಲ್ಲಿ ಕಾರ್ಯಕ್ರಮಕ್ಕೆ ಆಯೋಜನೆ ವಿಚಾರ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.