ಯಾದಗಿರಿ: ನಾನು ಬಿಜೆಪಿ ರಾಜ್ಯಾಧ್ಯಕ್ಷ (BJP State President) ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ (Congress) ಸೇರುವ ಪ್ರಮೇಯವೇ ಬರೋದಿಲ್ಲ ಎಂದು ಮಾಜಿ ಸಚಿವ ರಾಜೂ ಗೌಡ (Raju Gowda) ಸ್ಪಷ್ಟ ಪಡಿಸಿದ್ದಾರೆ.
Advertisement
ಈ ಹಿಂದೆ ತಾವು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹುಣಸಗಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡುವ ಬಗ್ಗೆ ವರಿಷ್ಠರನ್ನು ಕೇಳುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಡಿ ಸುಧಾಕರ್ ರಾಜೀನಾಮೆ ಪಡೆದು ಬಂಧನ ಮಾಡಿ: ಹೆಚ್‌ಡಿಕೆ
Advertisement
Advertisement
ಚುನಾವಣೆಯಲ್ಲಿ ವಾಜಪೇಯಿ, ಇಂದಿರಾ ಗಾಂಧಿ (Indira Gandhi), ಸಿದ್ದರಾಮಯ್ಯ (Siddaramaiah) ಅವರು ಸೋತಿಲ್ವಾ?. ಸೋತಾಗ ಪಕ್ಷ ನಿಷ್ಠೆಗೆ ಬದ್ಧವಾಗಿ ಕೆಲಸ ಮಾಡಿದ್ರೆ ಉನ್ನತ ಹುದ್ದೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ರಾಜೂಗೌಡ, ನಾನು ಪಾರ್ಟ್ ಟೈಮ್ ಪಾಲಿಟಿಷನ್. ದಿನದ 24 ಗಂಟೆ ನಾನು ರಾಜಕೀಯ ಮಾಡಲ್ಲ. ನಾನು ಒಕ್ಕಲುತನ ಮಾಡುತ್ತೇನೆ. ಚುನಾವಣೆಯಲ್ಲಿ ಸೋತು ನಾನು ಕಷ್ಟದಲ್ಲಿದ್ದೀನಿ. ಅದೇ ರೀತಿ ಪಕ್ಷ ಕಷ್ಟದಲ್ಲಿದೆ. ಇಂತಹ ಸಂದರ್ಭಗಳಲ್ಲಿ ಪಕ್ಷದ ಜೊತೆ ಇದ್ದರೆ ಮುಂದೆ ಉಜ್ವಲ ಭವಿಷ್ಯ ಇರುತ್ತದೆ ಎಂದು ತಿಳಿಸಿದರು.
Advertisement
Web Stories