ವಿಜಯನಗರ: 5 ವರ್ಷ ನಮ್ಮದೇ ಸರ್ಕಾರ ಇರುತ್ತೆ. ನಾನು ಈಗ ಮುಖ್ಯಮಂತ್ರಿ. ಮುಂದಿನ 5 ವರ್ಷವೂ ನಾನೇ ಸಿಎಂ (CM) ಆಗಿರುತ್ತೇನೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah) ಎಲ್ಲಾ ಊಹಾಪೋಹಗಳಿಗೂ ತೆರೆಎಳೆದಿದ್ದಾರೆ.
ಜಿಲ್ಲೆಯ ಹೊಸಪೇಟೆಯಲ್ಲಿ ಸಿಎಂ ಬದಲಾವಣೆ ವಿಚಾರದ ಬಗ್ಗೆ ನಡೆಯುತ್ತಿರುವ ಭಾರೀ ಚರ್ಚೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಈಗ ಮುಖ್ಯಮಂತ್ರಿ, ಮುಂದಿನ 5 ವರ್ಷ ನಮ್ದೇ ಸರ್ಕಾರ ಇರುತ್ತೆ. ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮಾಂಡ್. ನಮ್ಮದು ನ್ಯಾಷನಲ್ ಪಾರ್ಟಿ. ಏನೇ ತೀರ್ಮಾನ ಆದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗೋದು ಎಂದು ಉತ್ತರಿಸಿದರು.
ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತದೆ ಎನ್ನುವ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಎಂ, ಅವರು ಸೊತಿದ್ದಾರೆ, ಬೇರೆ ಕೆಲಸ ಇಲ್ಲದ್ದಕ್ಕೆ ಬಾಯಿಗೆ ಬಂದಹಾಗೆ ಮಾತಾಡುತ್ತಾರೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. 5 ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ. ಬಿಜೆಪಿಯವರು ಭ್ರಮ ನಿರಸಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರೋಕೆ ಆಗಲ್ಲ. ಮತ್ತೆ ಆಪರೇಷನ್ ಮಾಡೋಕೆ ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲ್ಲ ಎಂದರು. ಇದನ್ನೂ ಓದಿ: ಚಿಣ್ಣರ ಬಿಂಬ ಸಾಂಸ್ಕೃತಿಕ ಸಂಸ್ಥೆ ಮುಡಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ವಿಜಯನಗರ (Vijayanagar) ಜಿಲ್ಲೆಯಾದ ಬಳಿಕ ಮೊದಲ ಬಾರಿ ಸಿಎಂ ಆದ ಬಳಿಕ ಬಂದಿರುವೆ. 36 ಕೋಟಿ ರೂ. ವೆಚ್ಚದಲ್ಲಿ ಶಾಲೆ, ಕಾಲೇಜು ಮತ್ತು ಗ್ರಂಥಾಲಯ ಉದ್ಘಾಟನೆ ಮಾಡಿದ್ದೇವೆ. ಈ ಬಾರಿಯೂ ಹಂಪಿ ಉತ್ಸವ ಮಾಡುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ಕರ್ನಾಟಕದ ಹೆಸರು ನಾಮಕರಣವಾಗಿ 50 ವರ್ಷವಾಗಿದೆ. ಇದರ ಸಂಭ್ರಮಾಚರಣೆ ಮಾಡಲು ವಿಶೇಷ ಕಾರ್ಯಕ್ರಮ ಮಾಡಲಾಗುತ್ತಿದೆ. ಸಂಜೆ ಹಂಪಿಯಲ್ಲಿ ಸಂಭ್ರಮಾಚರಣೆಯ ಕಾರ್ಯಕ್ರಮ ಮಾಡುತ್ತೇವೆ. ವರ್ಷವಿಡೀ ಸಂಭ್ರಮಾಚರಣೆ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೊಡಗಿನ 19,000ಕ್ಕೂ ಅಧಿಕ ಮಹಿಳೆಯರಿಗೆ ʻಗೃಹಲಕ್ಷ್ಮಿʼ ಸಿಕ್ಕಿಲ್ಲ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]