ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಅವರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಖುದ್ದು ದೊಡ್ಡಣ್ಣ (Actor Doddanna) ಅವರೇ, ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ವಿಡಿಯೋ ಮೂಲಕ ತಿಳಿಸಿರುವ ಅವರು, ಬೆಳಿಗ್ಗೆ ನಾನು ಎದ್ದೇಳುವ ಮುಂಚೆಯೇ ಯಾರೋ ಅವಿವೇಕಿಗಳು ನಾನು ನಿಧನ ಎಂದು ಸುದ್ದಿ ಹಬ್ಬಿಸಿದ್ದರು. ಅದು ಶುದ್ಧ ಸುಳ್ಳು. ನಾನು ಆರೋಗ್ಯವಾಗಿ, ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದಲೂ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಬಿಟ್ಟುಬಿಡದೇ ಕರೆ ಮಾಡ್ತಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ನೂರುಕಾಲ ಚೆನ್ನಾಗಿರುತ್ತೇನೆ ಅಂತಾ ನಂಬಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು – ಎಕ್ಸ್ ಪೋಸ್ಟ್‌ನಲ್ಲಿ ನಟ ಸ್ಪಷ್ಟನೆ
ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳನ್ನು ಸುಮ್ಮನೇ ಬಿಡಲ್ಲ. ಅವರನ್ನು ಬೆನ್ನತ್ತಿ ತಕ್ಕ ಶಿಕ್ಷೆ ಕೊಡಿಸುತ್ತೇನೆ ಎಂದು ತಿಳಿಸಿದ್ದಾರೆ.
