ಯಾದಗಿರಿ: ನಾನು ಒಂದ ತರಹ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಪ್ರಧಾನಿ ಮೋದಿ ಅವರಿಗೆ ಪತ್ನಿ ಇಲ್ಲ. ಆದರೆ ನನಗೆ ಪತ್ನಿಯಿದ್ದಾಳೆ ಅಷ್ಟೇ ವ್ಯತ್ಯಾಸ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಹೇಳಿದ್ದಾರೆ.
ಜಿಲ್ಲೆಯ ಗುರುಮಠಕಲ್‍ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉಮೇಶ್ ಜಾಧವ್ ಗೆದ್ದರೆ ಕೇಂದ್ರದಲ್ಲಿ ಸಚಿವರಾಗುತ್ತಾರೆ. ಅವರು ಸಚಿವರಾದರೆ ಕ್ಷೇತ್ರದ ಪ್ರತಿಯೊಬ್ಬರೂ ಮಂತ್ರಿ ಇದ್ದಂತೆ. ಹೀಗಾಗಿ ಉಮೇಶ್ ಜಾಧವ್ ಅವರನ್ನು ಬಹುಮತದಿಂದ ಗೆಲ್ಲಿಸಿದರೆ ಪಾದಕ್ಕೆ ನಮಾಸ್ಕಾರ ಮಾಡುತ್ತೇನೆ ಎಂದು ಮನವಿ ಮಾಡಿಕೊಂಡರು.
ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹಳೇ ಪರ್ವತವಿದ್ದಂತೆ. ಆ ಪರ್ವತ ನಿಧಾನವಾಗಿ ಬೀಳುತ್ತದೆ ಎಂದು ವ್ಯಂಗ್ಯವಾಡುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆಗೆ ಟಾಂಗ್ ಕೊಟ್ಟರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv