ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹ ಎದ್ದಿದ್ದು, ಇದಕ್ಕೆ ಸಿದ್ದರಾಮಯ್ಯ ಇಂದು ತೆರೆ ಎಳೆದಿದ್ದಾರೆ.
ಭಾನುವಾರ ಹಾಸನದ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣೇಗೌಡರ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ನಾನು ಇಲ್ಲಿಯ ಕ್ಯಾಂಡಿಡೇಟ್ ಅಲ್ಲ. ನಾನು ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಇದಕ್ಕಿಂತ ಸ್ಪೆಸಿಫಿಕ್ಕಾಗಿ ಏನು ಹೇಳಲಿ ಎಂದು ಜನರ ಊಹೆಯನ್ನು ಅಲ್ಲಗಳೆದಿದ್ದಾರೆ. ಇದನ್ನೂ ಓದಿ: 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಕೋವಿಡ್‌ನಿಂದ ಸಾವು: ಕೇಂದ್ರಕ್ಕೆ ರಾಹುಲ್ ತರಾಟೆ
Advertisement
Advertisement
ಇದೇ ವೇಳೆ, ನನಗೆ ಇರುವ ಮಾಹಿತಿ ಪ್ರಕಾರ ಅವಧಿಗೂ ಮೊದಲು ಚುನಾವಣೆ ನಡೆಯಲ್ಲ. 2023ರ ಏಪ್ರಿಲ್, ಮೇ ತಿಂಗಳಿನಲ್ಲೇ ಚುನಾವಣೆ ನಡೆಯುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಸರ್ವೇ ನಡೆಸುತ್ತೇವೆ. ಯಾರು ಗೆಲ್ಲುತ್ತಾರೋ, ಜನಾಭಿಪ್ರಾಯ ಯಾರ ಪರವಾಗಿರುತ್ತದೆಯೋ ಅವರಿಗೇ ಟಿಕೆಟ್ ಕೊಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಭಾವನಾತ್ಮಕ ವಿಚಾರ ಮುನ್ನಲೆಗೆ ತಂದು ಬಿಜೆಪಿ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ: ಈಶ್ವರ್ ಖಂಡ್ರೆ
Advertisement
ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ನಮ್ಮಲ್ಲಿ 4-5 ಆಕಾಂಕ್ಷಿಗಳಿದ್ದು, ಬೇರೆ ಪಕ್ಷದಲ್ಲಿ ಅಭ್ಯರ್ಥಿಗಳೇ ಇಲ್ಲ. ಇದರೊಂದಿಗೆ ಪಕ್ಷ ಬಿಟ್ಟು ಹೋದವರು, ಬೇರೆ ಪಕ್ಷದ ಕೆಲವರು ನಮ್ಮೊಂದಿಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಲಾಗಿಲ್ಲ ಎಂದು ತಿಳಿಸಿದ್ದಾರೆ.