ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ (Udayanidhi Stalin) ನೀಡಿರುವ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ಈ ಬಗ್ಗೆ ನಟ ಚೇತನ್ ಮಾತನಾಡಿದ್ದಾರೆ. ಧರ್ಮದ ಬಗ್ಗೆ ಉದಯನಿಧಿ ಯಾವ ವ್ಯಾಪ್ತಿಯಲ್ಲಿ ಮಾತನಾಡಿದ್ದಾರೆ ಅನ್ನೋದನ್ನು ನೋಡಬೇಕು ಎಂದು ನಟ ಚೇತನ್ (Chethan) ಮಾತನಾಡಿದ್ದಾರೆ.
ತುಮಕೂರಿನಲ್ಲಿ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಗೆ ಚೇತನ್ ಪ್ರತಿಕ್ರಿಯಿಸಿ, ಮಾತನಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಯಾವ ವ್ಯಾಪ್ತಿಯಲ್ಲಿ ಹೇಳಿದ್ದಾರೆ ಅನ್ನೋದನ್ನು ನೋಡಬೇಕು. ನಾನು ಸನಾತನ ಧರ್ಮದ ವಿರೋಧಿಯಲ್ಲ. ಸನಾತನ ಧರ್ಮದಲ್ಲಿನ ಅಸಮಾನತೆಯ ವಿರೋಧಿ ಆಗಿದ್ದೇನೆ ಎಂದು ಚೇತನ್ ಮಾತನಾಡಿದರು.
ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಈ ಮೂರೂ ಧರ್ಮದಲ್ಲೂ ಅಸಮಾನತೆ ಇದೆ. ಕೇಂದ್ರ ಸರ್ಕಾರ ತರಲು ಹೊರಟಿರುವ ಏಕರೂಪ ನಾಗರಿಕ ಸಂಹಿತೆ ವಿಚಾರವಾಗಿ ಸಹಮತವಿದೆ. ಅದು ಸಮಾಜದ ಸಿವಿಲ್ ಕೋಡ್ ಆಗಿರಬೇಕು. ಕಮ್ಯೂನಿಸ್ಟ್‌ಗಳು ಅದನ್ನು ವಿರೋಧಿಸಬಹುದು. ಆದರೆ ಈ ವಿಚಾರದಲ್ಲಿ ನಮ್ಮ ಬೆಂಬಲ ಇದೆ ಎಂದರು ಚೇತನ್. ಇದನ್ನೂ ಓದಿ:Bigg Boss Kannada 10 ಆರಂಭ- ಈ 3 ಸೀರಿಯಲ್‌ಗೆ ಗೇಟ್ ಪಾಸ್
ಬಳಿಕ ಕಾಂಗ್ರೆಸ್‌ನವರು ಐದು ಗ್ಯಾರಂಟಿ ತಂದು ತೇಪೆ ಹೆಚ್ಚುವ ಕೆಲಸ ಮಾಡುತ್ತಿದ್ದಾರೆ. ಅದನ್ನು ದೇವರಾಜ ಅರಸು ಆಡಳಿತಕ್ಕೆ ಹೋಲಿಸಬೇಡಿ ಎಂದಿದ್ದಾರೆ. ಎಸ್ಸಿ ಎಸ್ಟಿಗಳ ಅನುದಾನ ಗ್ಯಾರಂಟಿಗೆ ಬಳಸಿಕೊಂಡು ಪಕ್ಷದವರು ಮೋಸ ಮಾಡಿದ್ದಾರೆ. ಸಿದ್ದರಾಮಯ್ಯ ರೈತರ ಭೂಮಿಯನ್ನು ಗಣಿಗಾರಿಕೆಗೆ ಕೊಟ್ಟಿದ್ದಾರೆ ಎಂದು ಚೇತನ್ ಕಿಡಿಕಾರಿದ್ದರು. ಅಂದು ಗಣಿಗಾರಿಕೆ ವಿರುದ್ಧವೇ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ದರು ಎಂದು ಟಾಂಗ್ ಕೊಟ್ಟರು.
ಲೇಖಕರ ಸಮಾವೇಶವೊಂದರಲ್ಲಿ ಇತ್ತೀಚಿಗೆ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.