DistrictsHassanKarnatakaLatestMain Post

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಕೊಟ್ಟರೆ ಬೇಡ ಅನ್ನಲ್ಲ: ಎನ್.ಮಹೇಶ್

ಹಾಸನ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಚಿವ ಸ್ಥಾನ ಕೊಟ್ಟರೆ ಬೇಡ ಅನ್ನಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಷರತ್ತುಗಳನ್ನು ಹಾಕಿ ಅಥವಾ ಆಮಿಷಗಳಿಗೆ ಒಳಗಾಗಿ ಬಿಜೆಪಿ ಪಾರ್ಟಿಗೆ ಸೇರಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಂತ ಸಚಿವ ಸ್ಥಾನ ಕೊಟ್ಟರೆ ಬೇಡ ಅನ್ನಲ್ಲ. ನನ್ನನ್ನ ಬಳಸಿಕೊಂಡು ಅವಕಾಶ ಕೊಟ್ಟರೆ ಇನ್ನೂ ದೊಡ್ಡ ಪ್ರಮಾಣದಲ್ಲಿ ಸಂಘಟನೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ಬಿಎಸ್‍ಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ಮಾತನಾಡಿ, ನನ್ನನ್ನು ಬಿಎಸ್‍ಪಿಯಿಂದ ಉಚ್ಛಾಟನೆ ಮಾಡದಿದ್ದರೆ ಅದೇ ಪಕ್ಷದಲ್ಲಿ ಮುಂದುವರಿಯುತ್ತಿದ್ದೆ. ಆದರೆ ಒಂದೇ ಭಾರಿ ನನ್ನನ್ನು ಕಟ್ ಮಾಡಿ ಬಿಸಾಡಿದ್ರು. ಮುಂದಿನ ಚುನಾವಣೆಯಲ್ಲಿ ಕೊಳ್ಳೇಗಾಲದಿಂದ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಪಕ್ಷ ಟಿಕೆಟ್ ನೀಡುವ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Back to top button