ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜುಲೈ 21ಕ್ಕೆ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ವಿಪರ್ಯಾಸ ಎಂದರೆ 21ರಂದು ನನ್ನ 81ನೇ ವರ್ಷದ ಜನ್ಮದಿನ. ಹೀಗಾಗಿ ಅವರು ಇಡಿ ಮುಂದೆ ಹೋಗುವಾಗ ನಾನು ಹುಟ್ಟುಹಬ್ಬ ಆಚರಿಸುವುದು ಸರಿಯಲ್ಲ ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Advertisement
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬೆಂಬಲಿಗರು, ಅಭಿಮಾನಿಗಳು ಬೆಂಗಳೂರಿಗೆ ಬರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. 1 ತಿಂಗಳಿಂದ ಜನ್ಮ ದಿನಾಚರಣೆ ಚರ್ಚೆ ಮಾಡುತ್ತಿದ್ದರು. ಆದರೆ ನಮ್ಮ ಅಧ್ಯಕ್ಷರಾದ ಸೋನಿಯಾ ಅವರು ತೊಂದರೆಯಲ್ಲಿದ್ದಾರೆ, ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಇಡಿ ಮುಂದೆ ಅವರು ಹೋಗುವಾಗ ನಾನು ಹುಟ್ಟು ಹಬ್ಬ ಆಚರಿಸುವುದು ಸರಿಯಲ್ಲ. ಹೀಗಾಗಿ ನಮ್ಮ ಬೆಂಬಲಿಗರಿಗೆ, ಹಿತೈಷಿಗಳಿಗೆ ಯಾರೂ ಬೆಂಗಳೂರು, ದೆಹಲಿಗೆ ಬರುವುದು ಬೇಡ ಎಂದು ಕೇಳಿಕೊಳ್ಳುತ್ತೇನೆ. ಜನ್ಮ ದಿನಾಚರಣೆ ಆಚರಿಸುವುದಿಲ್ಲ. ನಾವು ಸೋನಿಯಾ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕಿದೆ ಎಂದು ಹೇಳಿದರು.
Advertisement
Advertisement
ಒಕ್ಕಲಿಗ ಜಾತಿಯ ವ್ಯಕ್ತಿ ಸಿಎಂ ಆಗಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಬಹುಮತ ಬಂದ ಮೇಲೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ತತ್ವ, ಸಿದ್ದಾಂತ ಉಳಿಸಲು ನಾವು ಹೋರಾಟ ಮಾಡಬೇಕು. ಎಷ್ಟೋ ಪಕ್ಷಗಳು ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಆದರೂ ಅವು ನಂಬಿದ ಸಿದ್ಧಾಂತ ಬಿಟ್ಟು ಬೇರೆ ಕಡೆ ಹೋಗಿಲ್ಲ. ಪ್ರಜಾಪ್ರಭುತ್ವ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ನಾವು ಬದ್ಧರಾಗಿರಬೇಕು ಎಂದರು.
Advertisement
ಸಿದ್ದರಾಮೋತ್ಸವ ಬಗ್ಗೆ ನಾನು ಏನೂ ಹೇಳಲಾರೆ. ಅದು ಆಗಸ್ಟ್ 3ಕ್ಕೆ ನಡೆಯುತ್ತೆ, ನನ್ನ ಜನ್ಮದಿನ 21ಕ್ಕೆ ನಡೆಯುತ್ತೆ ಎಂದು ಖರ್ಗೆ ತಿಳಿಸಿದರು. ಇದನ್ನೂ ಓದಿ: ನೂಪುರ್ ಶರ್ಮಾಗೆ ಬಿಗ್ ರಿಲೀಫ್- ಆಗಸ್ಟ್ 10ರವರೆಗೂ ಬಂಧಿಸದಂತೆ ಸುಪ್ರೀಂ ಸೂಚನೆ