ನಾನು ಯಾರ ಮೇಲೆ ದೂರೋದಿಲ್ಲ, ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತೆ: ಬಿಎಸ್‌ವೈ

Public TV
1 Min Read
BS Yediyurappa

– ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಮಾಜಿ ಸಿಎಂ

ಚಿಕ್ಕಬಳ್ಳಾಪುರ: ದೆಹಲಿಗೆ ತೆರಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ಬೆಂಗಳೂರಿಗೆ (Bengaluru) ಮರಳಿದ್ದು ಪೋಕ್ಸೋ (POCSO) ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೋಕ್ಸೋ ಪ್ರಕರಣ ಹಾಗೂ ಅರೆಸ್ಟ್ ವಾರಂಟ್ ಪ್ರಹಸನದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ನಿಗದಿತ ಕಾರ್ಯಕ್ರಮದ ಅಂಗವಾಗಿ ದೆಹಲಿಗೆ ತೆರಳಿದ್ದೆ. ಮೊದಲೇ ನಾನು ಜೂನ್ 17ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದೆ. ಆದರೂ ಕೂಡ ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದರು ಎಂದರು. ಇದನ್ನೂ ಓದಿ: ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ

ಈಗಾಗಲೇ ಹೈಕೋರ್ಟ್ ಸಹ ಬಂಧನ ಕುರಿತು ತಡೆಯಾಜ್ಞೆ ನೀಡಿದೆ. ಈಗಲೇ ನಾನು ಯಾರ ಮೇಲೂ ದೂರೋದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ. ರಾಜ್ಯದ ಜನರಿಗೆ ವಾಸ್ತವ ಏನು ಎಂಬುದು ಗೊತ್ತಿದೆ. ಯಾರು ಕುತಂತ್ರ ಮಾಡಿದರೋ ಅವರಿಗೆ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬಿಎಸ್‍ವೈ ವಿರುದ್ಧ ದ್ವೇಷದ ರಾಜಕೀಯ: ಆರ್.ಅಶೋಕ್

Share This Article