ನವದೆಹಲಿ: ರಾಜ್ಯದ ಮುಖ್ಯಮಂತ್ರಿ ಕುರ್ಚಿ ಕದನ ಕೊನೆಗೂ ಬಗೆಹರಿದಿದೆ. ಡಿಕೆ ಶಿವಕುಮಾರ್ (DK Shivakumar) ಅವರಿಗೆ ಉಪಮುಖ್ಯಮಂತ್ರಿ ಪಟ್ಟ ದೊರಕಿದೆ. ಆದರೆ ಇದು ನಮಗೆ ಸಂಪೂರ್ಣ ಖುಷಿ ಕೊಟ್ಟಿಲ್ಲ ಎಂದು ಸಂಸದ ಡಿಕೆ ಸುರೇಶ್ (DK Suresh) ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟಿರುವುದು ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಇದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ತಿಳಿಸಿದರು.
Advertisement
Advertisement
ಮುಂದೆ ಏನಾಗುತ್ತೆ ಎಂಬುದನ್ನು ನೋಡೋಣ. ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕೆಂಬುದು ನನ್ನ ಹಾರೈಕೆ ಆಗಿತ್ತು. ಆದರೆ ಆ ಆಸೆ ಈಡೇರಲಿಲ್ಲ. ಕಾದು ನೋಡೋಣ ಎಂದು ಸುರೇಶ್ ಹೇಳಿದರು. ಇದನ್ನೂ ಓದಿ: ಸಿಎಂ ಕುರ್ಚಿ ಕದನ ಅಂತ್ಯ – ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ
Advertisement
ಕರ್ನಾಟಕ ವಿಧಾನಸಭಾ ಚುನಾವಣೆ (Assembly Election) ಯಲ್ಲಿ ಕಾಂಗ್ರೆಸ್ (Congress) ಗೆದ್ದು ಬೀಗಿದರೂ, ಸಿಎಂ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿತ್ತು. ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಕುರ್ಚಿ ಕನದನ ನಡೆದಿದ್ದು, ಕೊನೆಗೂ ಇದಕ್ಕೆ ಫುಲ್ ಸ್ಟಾಪ್ ಬಿದ್ದಿದೆ. ಇದೀಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ, ಡಿಕೆ ಶಿವಕುಮಾರ್ ಅವರನ್ನು ಡಿಸಿಎಂ ಆಯ್ಕೆ ಮಾಡಲಾಯಿತು.