ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ಬಿಜೆಪಿಯನ್ನು ಸೋಲಿಸುವ ಕಾರ್ಯದಲ್ಲಿ ನಿರತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯವರೊಂದಿಗೆ ಸ್ಪರ್ಧೆ ಮಾಡಿ ಪೈಪೋಟಿ ನೀಡಲು ಶ್ರಮಿಸುತ್ತಿದ್ದೇನೆ ಹೊರತು ಪ್ರಧಾನಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
Advertisement
ಗುಜರಾತ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪ್ರಧಾನಿ ಹುದ್ದೆಗಳಿಗಾಗಿ ಇಲ್ಲಿಗೆ ಬಂದಿಲ್ಲ. ನಾನು ಭಾರತವನ್ನು ನಂ.1 ದೇಶವನ್ನಾಗಿ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ನಿಂದನೆ ಆರೋಪ – ಹಿಂದೂ ವ್ಯಕ್ತಿ ಅಪಾರ್ಟ್ಮೆಂಟ್ ಸುತ್ತ ಜನವೋ ಜನ
Advertisement
ದೆಹಲಿ ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಿಬಿಐ ತನಿಖೆ ಎದುರಿಸುತ್ತಿದ್ದು, ಅವರನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಡುತ್ತಿರುವ ಕೇಜ್ರಿವಾಲ್ ಅವರು, ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿ ತನ್ನ ರಾಜಕೀಯ ವಿರೋಧಿಗಳನ್ನು ಟಾರ್ಗೆಟ್ ಮಾಡಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮನೀಶ್ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು: ಅರವಿಂದ್ ಕೇಜ್ರಿವಾಲ್
Advertisement
Advertisement
ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಬಹುದು ಎಂಬ ಮಾತಗಳನ್ನು ನಾನು ಕೇಳಿಸಿಕೊಳ್ಳುತ್ತಿದ್ದೇನೆ. ಯಾರಿಗೆ ಗೊತ್ತು, ನನ್ನನ್ನೂ ಕೂಡ ಬಂಧಿಸಬಹುದು. ಇದೆಲ್ಲವನ್ನೂ ಗುಜರಾತ್ ಚುನಾವಣೆಗಾಗಿ ಮಾಡಲಾಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.