– ನಾವು ಕೊರೊನಾದ ಜೊತೆಗೆ ಬದುಕಬೇಕಿದೆ
ಮೈಸೂರು: ನಾನು ಲಾರ್ಡ್ ಶಿವ ಅಲ್ಲ. ನಾನು ನಿಮ್ಮ ಶಿವಣ್ಣ ಮಾತ್ರ ಎಂದು ಚಂದನವನದ ನಟ ಶಿವರಾಜ್‍ಕುಮಾರ್ ಅಭಿಮಾನಿಗಳಿಗೆ ಹೇಳಿದರು.
Advertisement
ಮೈಸೂರಿನಲ್ಲಿ ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಭಾಷಣ ಮಾಡಿದ ಅವರು, ಕೋವಿಡ್-19 ಸಂದರ್ಭದಲ್ಲಿ ಇಂತಹ ಆಸ್ಪತ್ರೆ ಬಹಳ ಅಗತ್ಯ. ಅಪ್ಪು ಹೆಸರಿನಲ್ಲಿ ಚಿಕಿತ್ಸೆಗೆ ರಿಯಾಯಿತಿ ಕೊಡಲಾಗುತ್ತಿದೆ. ಅಪ್ಪುಗೆ ಯೋಗ, ಯೋಗ್ಯತೆ ಎರಡೂ ಇದೆ. ಹೀಗಾಗಿ ಈ ರೀತಿಯ ಸ್ಮರಣೆ ಆಗುತ್ತಿದೆ. ದೊಡ್ಡವರು, ಚಿಕ್ಕವರು ಎಂಬ ಬೇಧ ಇರದೆ ಎಲ್ಲರಿಗೂ ಸಮನಾಗಿ ಚಿಕಿತ್ಸೆ ನೀಡಿ ಎಂದು ಆಶಿಸಿದರು. ಇದನ್ನೂ ಓದಿ: ಸಂಪೂರ್ಣವಾಗಿ ನೋವು ಹೇಳಿಕೊಳ್ಳೋ ಸ್ಥಿತಿಯಲ್ಲಿಲ್ಲ, ಅದರೊಂದಿಗೆ ಬದುಕ್ತಿದ್ದೇವೆ: ಅಪ್ಪು ನೆನೆದ ಶಿವಣ್ಣ
Advertisement
Advertisement
ಗೀತಾ ತನ್ನ ತಾಯಿಯ ಸ್ಥಾನದಲ್ಲಿ ನಿಂತು ಶಕ್ತಿಧಾಮ ನೋಡಿಕೊಳ್ಳುತ್ತಿದ್ದಾರೆ. ನಾನು ಲಾರ್ಡ್ ಶಿವ ಅಲ್ಲ. ನಾನು ನಿಮ್ಮ ಶಿವಣ್ಣ ಮಾತ್ರ. ನಾನು ಶಿವಣ್ಣ ಆಗಿರೋಕೆ ಮಾತ್ರ ಇಷ್ಟ ಪಡುತ್ತೇನೆ ಎಂದು ಹೇಳಿ ಅಭಿಮಾನಿಗಳನ್ನು ರಂಜಿಸಲು ‘ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು’ ಎಂದು ಹಾಡನ್ನು ಹಾಡಿದರು. ನಂತರ ಆಸ್ಪತ್ರೆಗೆ ಅಪ್ಪು ಹೆಸರಿನಲ್ಲಿ ಎರಡು ಗಂಧದ ಗಿಡ ಕೊಟ್ಟಿದ್ದಾರೆ.
Advertisement
ಉದ್ಯಮಿ ಕೆ.ಬಿ.ಕುಮಾರ್ ಕುಟುಂಬದ ಒಡೆತನದ ಆಸ್ಪತ್ರೆ ಇದಾಗಿದೆ. ಈ ಆಸ್ಪತ್ರೆಯಲ್ಲಿ 150 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗಿದ್ದು, ಯೋಗಾನರಸಿಂಹಸ್ವಾಮಿ ದೇಗುಲದ ಶ್ರೀ ಭಾಷ್ಯಂ ಸ್ವಾಮಿಜೀ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಆಸ್ಪತ್ರೆಯ ಸಿಇಓ ಆಗಿ ಪುತ್ರಿ ಹಾಗೂ ಕೈಂಡ್ ಆರ್ಟ್ ಟ್ರಸ್ಟ್ ನಯನ ಮುನ್ನೆಡಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿಟಿ ದೇವೇಗೌಡ, ಪುತ್ರ ಜಿಡಿ ಹರೀಶ್ ಗೌಡ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಕರಿಷ್ಮಾ ಫಿಟ್ನೆಸ್ ಹೊಗಳಿದ ಮಲೈಕಾ ಅರೋರಾ
ಇದೇ ವೇಳೆ ಸಿನಿಮಾ ಮಂದಿರಗಳಿಗೆ ಕೋವಿಡ್ 50:50 ರೂಲ್ಸ್ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ ನಾನು ಈ ಬಗ್ಗೆ ಮಾಹಿತಿ ತೆಗೆದುಕೊಂಡಿದ್ದೇನೆ. ನಾವು ಕೊರೊನಾದ ಜೊತೆ ಜೊತೆಗೆ ಬದುಕಬೇಕಿದೆ. ಅದರ ಜೊತೆಗೆ ಬದುಕಬೇಕಾದ ಅನಿವಾರ್ಯತೆ ಇದೆ. ಎಲ್ಲ ಕ್ಷೇತ್ರಗಳಿಗೂ 50:50 ರೂಲ್ಸ್ ನಿಂದ ರಿಲ್ಯಾಕ್ಸ್ ಕೊಡಲಾಗಿದೆ. ಆದರೆ ಸಿನಿಮಾ ಮಂದಿರಗಳಿಗೆ ಯಾಕೆ ರಿಲ್ಯಾಕ್ಸ್ ಕೊಟ್ಟಿಲ್ಲ ಎಂದು ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ನಮಗೆ ಸಾಕಷ್ಟು ಬಾರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಈಗಲೂ ನಮಗೆ ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ವಿವರಿಸಿದರು.