ದಾವಣಗೆರೆ: ನಾನು ಡಿ.ಕೆ ಶಿವಕುಮಾರ್ (D.K Shivakumar) ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದು ಶಾಸಕ ಶಿವಗಂಗಾ ಬಸವರಾಜ್ (Shivaganga Basavaraj) ಹೇಳಿದರು.
ದಾವಣಗೆರೆಯಲ್ಲಿ (Davanagere) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷದಲ್ಲಿ ಐದಾರು ಬಾರಿ ಗೆದ್ದ ಹಿರಿಯ ಶಾಸಕರು ಇದ್ದಾರೆ. ನನಗೆ ಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಸಿಕ್ಕಿಲ್ಲ, ಮುಂದೆ ಸಾಕಷ್ಟ ಅವಕಾಶಗಳಿವೆ ಕಾದು ನೋಡೋಣ. ಅದರ ಬಗ್ಗೆ ಬಿಟ್ಟು ಅಭಿವೃದ್ಧಿ ಬಗ್ಗೆ ಮಾತನಾಡಬೇಕಿದೆ ಎಂದರು. ಇದನ್ನೂ ಓದಿ: ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಬಗ್ಗೆ ಛಲವಾದಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆ
ಭ್ರಷ್ಟಾಚಾರ ಅರೋಪ ಇದ್ದರೂ ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಾರೆ ಎಂಬ ವಿಪಕ್ಷ ಗಳ ಅರೋಪಕ್ಕೆ, ಭ್ರಷ್ಟಾಚಾರ ಆರೋಪ ಯಾರ ಮೇಲೆ ಇಲ್ಲ ಹೇಳಿ? ಬಿಜೆಪಿಯವರಿಗೆ ಇದರ ಬಗ್ಗೆ ಮಾತನಾಡೋ ನೈತಿಕತೆ ಇಲ್ಲ. ಇದೀಗ ಆರೋಪಿಗಳು ಅಷ್ಟೇ, ಅಪರಾಧ ಸಾಬೀತಾದ್ರೆ ಆಗ ಮಾತಾಡಲಿ. ಕಾನೂನು ಪ್ರಕಾರ ಎನಿದೆ ಅದೇ ರೀತಿ ಅರೆಸ್ಟ್ ಮಾಡಿದ್ದರು. ಈಗ ಹೊರಗೆ ಬಂದಿದ್ದಾರೆ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದು ಸರಿ ಇದೆ ಎಂದು ಸಮರ್ಥಿಸಿಕೊಂಡರು.
ಸಚಿವ ಸಂಪುಟದಲ್ಲಿ ಡಿಕೆಶಿ ಆಪ್ತರು, ಸಿದ್ದರಾಮಯ್ಯ ಆಪ್ತರು ಎಂದು ಬರೋದಿಲ್ಲ. ಪ್ರಾಂತ್ಯವಾರು ಸಚಿವ ಸ್ಥಾನ ನೀಡಿದ್ದಾರೆ. ನಮ್ಮ ಕೆ.ಎಸ್ ಬಸವಂತಪ್ಪ ಅವರಿಗೆ ಕೊಟ್ಟಿದ್ದಾರೆ. ಈ ವಿಚಾರದಲ್ಲಿ ನಮಗೆ ಸಂತೋಷವಿದೆ ಎಂದರು.
ನಾನು ರೈತರ ಕೋಟಾ ಅಡಿ ಮಂತ್ರಿ ಸ್ಥಾನ ಕೇಳಿದ್ದೆ, ಆದರೆ ಕೊಟ್ಟಿಲ್ಲ. ಮುಂದೆ ಸಾಕಷ್ಟು ಅವಕಾಶ ಇದೆ, ಇನ್ನೂ ಮೊದಲ ಬಾರಿ ಗೆದ್ದಿರುವೆ. ಸಿಎಂ ರಾಜಕೀಯ ಕಾರ್ಯದರ್ಶಿ ಕೊಟ್ಟರೂ ನಿಭಾಯಿಸುವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೂರು ಬಾರಿ ಕರೆದು ಮಂತ್ರಿ ಮಾಡ್ತೀನಿ ಅಂದ್ರು, ಮಾಡಿಲ್ಲ: ಬಿ.ಆರ್.ಪಾಟೀಲ್ ಬೇಸರ



