ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾದರೆ ನಾನಾಗಲಿ ಅಥವಾ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೊಣೆಗಾರರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಚಿವರು, 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಚ್.ವಿಶ್ವನಾಥ್ ಸೋತಿದ್ದರು. ಆಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೊಣೆಯಾದರೆ ಹಾಗೇ ಇದು. ನಮ್ಮ ಕರ್ತವ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಅಷ್ಟೇ ಅಲ್ಲ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್-ಜೆಡಿಎಸ್ ನಡುವೆ ಯುದ್ಧ ನಡೆದಿದೆ. 2018ರ ವಿಧಾನಸಭಾ ಚುನಾವಣೆ ಬಳಿಕ ಈ ವಾತಾವರಣ ನಿರ್ಮಾಣವಾಗಿದೆ. ಆದರೆ ಇದು ರಾಷ್ಟ್ರಮಟ್ಟದ ಚುನಾವಣೆ. ಹೀಗಾಗಿ ಸ್ಥಳೀಯ ವಿರೋಧಗಳನ್ನು ಮರೆತು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದೇವೆ. ಈ ನಿಟ್ಟಿನಲ್ಲಿ ಇಂದು ಸಭೆ ಕೂಡ ಮಾಡಿದ್ದೇವೆ ಎಂದು ತಿಳಿಸಿದರು.
Advertisement
ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸೂತ್ರದ ಅನ್ವಯ ಹಳೆ ಮೈಸೂರು ಭಾಗದಲ್ಲಿ ಮಂಡ್ಯ, ಹಾಸನ, ತುಮಕೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದರೆ, ಮೈಸೂರು ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ಬಿಟ್ಟುಕೊಡಲಾಗಿದೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರಿಂದ ನಿರೀಕ್ಷಿತ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಈಗ ಬಹಿರಂಗವಾಗಿಯೇ ಬಹಿರಂಗವಾಗಿಯೇ ಕೈ ನಾಯಕರ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.