ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ನಾನು ಕಾಂಗ್ರೆಸ್ಸಿನಿಂದ ಅಮಾನತು ಮಾಡಿಲ್ಲ ಎಂದು ಬೇಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಸಿದ್ದು ಕಾಂಗ್ರೆಸ್ಸಿನಲ್ಲಿಲ್ಲ, ಇಂಡಿಯನ್ ಕಾಂಗ್ರೆಸ್ಸಿನಲ್ಲಿದ್ದೇನೆ ಎಂಬ ರೋಷನ್ ಬೇಗ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ನಾವೆಲ್ಲರೂ ಇಂಡಿಯನ್ ಕಾಂಗ್ರೆಸ್ಸಿನಲ್ಲಿಯೇ ಇದ್ದೇವೆ. ಆದರೆ ರೋಷನ್ ಬೇಗ್ ಎಲ್ಲಿದ್ದಾರೋ ಗೊತ್ತಿಲ್ಲ. ಅವರನ್ನು ಸಸ್ಪೆಂಡ್ ಮಾಡಿರುವುದು ಕಾಂಗ್ರೆಸ್ ಪಕ್ಷವೇ ಹೊರೆತು ನಾನಲ್ಲ. ನಾನು ಅವರನ್ನು ಅಮಾನತು ಮಾಡಿಸಿಲ್ಲ ಎಂದು ತಿರುಗೇಟು ನೀಡಿದರು.
ಜೆಡಿಎಸ್ ನಾಯಕ ವಿಶ್ವನಾಥ್ ಅವರ ಹೇಳಿಕೆ ಬಗ್ಗೆ ಮಾತನಾಡಿ, ಜಿಂದಾಲ್ ಪ್ರಕರಣದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಿ. ನಾನೇಕೆ ಮಾತನಾಡಬೇಕು ನನ್ನ ಹೆಸರನ್ನು ಏಕೆ ಪ್ರಸ್ತಾಪಿಸುತ್ತಾರೆ? ನಾನು ಜಾರ್ಜ್ ಜೊತೆ ಮಾತನಾಡಿ ಪರಿಶೀಲಿಸುವಂತೆ ಹೇಳಿದ್ದೇನೆ ಎಂದು ಕಿಡಿಕಾರಿದರು.
ಪಕ್ಷೇತರರಿಗೆ ಖಾತೆ ಕೊಡುವ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಖಾತೆ ಕೊಡಬೇಕಾದವರು. ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿ ಈ ಬೇಸಿಕ್ ತಿಳಿದುಕೊಳ್ಳಬೇಕು. ಖಾತೆ ಹಂಚುವಂತೆ ಸಿಎಂ ಜೊತೆ ಚರ್ಚೆ ಮಾಡಲಿ. ವಿಶ್ವನಾಥ್ ಹೇಳಿಕೆಗಳಿಗೆಲ್ಲಾ ಪ್ರತಿಕ್ರಿಯೆ ಕೊಡಲ್ಲ. ಅವರು ರಾಮಲಿಂಗ ರೆಡ್ಡಿ ಭೇಟಿಯ ಬಗ್ಗೆಯೂ ಏನೂ ಮಾತನಾಡೊಲ್ಲ ಎಂದು ಮಾತಿನ ಚಾಟಿ ಬೀಸಿದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]