ಬೆಂಗಳೂರು: ನಾನೀಗ ಸಿಎಂ ಅಲ್ಲ, ಅದಕ್ಕಾಗಿ ಹೆಚ್ಚು ಮಾತನಾಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎಂಬ ಚರ್ಚೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ದೇನೆ. ನಿನ್ನೆ ಅಧಿವೇಶನದಲ್ಲಿ ಭಾಗಿ ಆಗಿದ್ದೇನೆ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಆದರೆ ನಾನು ಹೆಚ್ಚು ಮಾತಾಡುತ್ತಿಲ್ಲ ಅಷ್ಟೇ. ನಾನೀಗ ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಬ್ದಾರಿ ಇಲ್ಲ ಎಂದರು. ಇದನ್ನೂ ಓದಿ: ಬೇಟೆಗಾರರ ಎನ್‌ಕೌಂಟರ್ ಕೇಸ್; ಕೊನೆಗೂ ಅರಣ್ಯಾಧಿಕಾರಿಗಳ ವಿರುದ್ಧ FIR ದಾಖಲು
ಮಹಿಳಾ ಕೋಟಾ ಭರ್ತಿ ಆಗಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ಇದರ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಅವರ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶವನ್ನೇ ಕೊಟ್ಟಿಲ್ಲ. ಮಹಿಳೆಯರಿಗೆ ಸ್ಥಾನ ಕೊಡಬೇಕೆಂದು ನಾನು ಹೇಳಿದ್ದೇನೆ ಎಂದು ನುಡಿದರು. ಬಸವರಾಜ ಶಿವಣ್ಣನವರ್ ಸಚಿವ ಸ್ಥಾನ ಕೊಡುವ ಬಗ್ಗೆ ಪ್ರತಿಕ್ರಿಯಿಸಿ, ಅದು ಗೊತ್ತಿಲ್ಲ, ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ರೆ ಪಿಡಿಒ ಅಮಾನತು: ಶಿವರಾಜ್ ತಂಗಡಗಿ ಎಚ್ಚರಿಕೆ
ಅಹಿಂದ ಚಳುವಳಿ ವಿಚಾರವಾಗಿ ಮಾತನಾಡಿ, ಅಹಿಂದ ಚಳುವಳಿ ನಡೆಯುತ್ತಿದೆ. ಹಿಂದುಳಿದ ವರ್ಗಗಳ ಒಕ್ಕೂಟದಿಂದ ಕಾರ್ಯಕ್ರಮ ನಡೆಯುತ್ತಿದೆ. 25ನೇ ವರ್ಷದ ಕಾರ್ಯಕ್ರಮ ನಡೆಯುತ್ತಿದೆ. ಆ ಕಾರ್ಯಕ್ರಮದಲ್ಲಿ ನಾನು ಭಾಗಿ ಆಗುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪ
