– ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ
ಬೆಂಗಳೂರು: ನಗರ ಪೊಲೀಸ್ ಕಮಿಷನರ್ (Bengaluru Police Commissioner) ಆಗಿ ಬಿ.ದಯಾನಂದ (B.Dayananda) ಅವರು ಬುಧವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
Advertisement
ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಯಾನಂದ ಅವರು, ಬೆಂಗಳೂರು ಕಾಸ್ಮೋಪಾಲಿಟನ್ ಸಿಟಿಯಾಗಿದೆ. ನಗರದ ಪೊಲೀಸ್ ಕಮಿಷನರ್ ಆಗಿ ಕೆಲಸ ಮಾಡಲು ಅವಕಾಶ ಕೊಟ್ಟ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಪೊಲೀಸ್ ಇಲಾಖೆ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ಆ ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನಾನು ಹುಟ್ಟಿ ಬೆಳದ ಸ್ಥಳ ಬೆಂಗಳೂರು. ನಾನು ಬೆಂಗಳೂರಿಗಾ ಅಂತ ಹೇಳಿಕೊಳ್ಳೋಕೆ ಹೆಮ್ಮೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ
Advertisement
Advertisement
ಬಹಳಷ್ಟು ಚಾಲೆಂಜ್‌ಗಳು ಕೂಡ ಇವೆ. ಅವುಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ. ಬೆಂಗಳೂರಿನಲ್ಲಿ ತಂತ್ರಜ್ಞಾನದ ಅವಶ್ಯಕತೆ ಇದೆ. ಪೊಲೀಸ್ ವ್ಯವಸ್ಥೆ ನೇರವಾಗಿ ಇರಬೇಕು, ಹತ್ತಿರವಾಗಿ ಇರಬೇಕು. ನಗರದ ಟ್ರಾಫಿಕ್ ನಿರ್ವಹಣೆಗೆ ಬೇರೆ ಬೇರೆ ಇಲಾಖೆಗಳ ಸಹಭಾಗಿತ್ವ ಬೇಕು ಎಂದು ಹೇಳಿದರು.
Advertisement
ಸಂಬಂಧಿತ ಇಲಾಖೆಗಳ ಜೊತೆಗೆ ಸೇರಿ ಟ್ರಾಫಿಕ್ ನಿಯಂತ್ರಣಕ್ಕೆ ಪ್ರಯತ್ನ ಮಾಡುತ್ತೇವೆ. ಮತ್ತೆ ಟೋಯಿಂಗ್ ಮಾಡೋ ಬಗ್ಗೆ ಯಾವುದೇ ತೀರ್ಮಾನ ಇಲ್ಲ. ಅದರ ಸಾಧಕ-ಬಾಧಕಗಳನ್ನು ಪರಿಶೀಲನೆ ನಡೆಸಿ, ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು. ಇದನ್ನೂ ಓದಿ: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ- ತಪ್ಪಿದ ಭಾರೀ ಅನಾಹುತ
ಸೈಬರ್ ಕ್ರೈಮ್ ಪೊಲೀಸರಿಗೆ ತರಬೇತಿ ಕೊರತೆ ಇದೆ. ಅತಿ ಹೆಚ್ಚು ಕೇಸ್‌ಗಳು ದಾಖಲಾಗಿ ಓವರ್ ಲೋಡ್ ಆಗ್ತಿದೆ. ಅದರಿಂದ ಸಣ್ಣಪುಟ್ಟ ಕೇಸ್‌ಗಳು ಸ್ಥಳೀಯ ಠಾಣೆಗಳಲ್ಲಿ ದಾಖಲಿಸಲು ಸೂಚನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.