ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆಯನ್ನು ಮಾಜಿ ಸಚಿವ ಶ್ರೀರಾಮುಲು (Sriramulu) ತೋಡಿಕೊಂಡಿದ್ದಾರೆ.
ಕೋಲಾರದ (Kolar) ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಜಯೇಂದ್ರ (BY Vijayendra) ಅವರು ರಾಜ್ಯಾಧ್ಯಕ್ಷರಾಗಿ ಇದ್ದರೆ, ಆಕಸ್ಮಿಕವಾಗಿ ಬದಲಾವಣೆಯಾದರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ. ಬಸನಗೌಡ ಯತ್ನಾಳ್ ನಮ್ಮ ಹೆಸರು ಪ್ರಸ್ತಾವನೆ ಮಾಡಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನಮ್ಮ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದಕ್ಕೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕುಂಭಮೇಳದ ಮೊನಾಲಿಸಾ ಸಿನಿಮಾ ಆಫರ್ ಒಪ್ಪಿದ್ಹೇಗೆ?
Advertisement
Advertisement
ಯಡಿಯೂರಪ್ಪ ಅವರಿಂದ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ ನನಗೆ ಅವಕಾಶಕೊಟ್ಟರೆ ರಾಜ್ಯದ 224 ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭಿನ್ನಾಭಿಪ್ರಾಯ ಶಮನ ಮಾಡುವೆ. ಮುಂಬರುವ 2028ರಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಕೆಲಸ ಮಾಡುತ್ತೇನೆ. ಯಡಿಯೂರಪ್ಪ ಅವರ ಆಶೀರ್ವಾದ ಬೇಕಾಗಿದೆ. ಒಂದು ವೇಳೆ ಹೈಕಮಾಂಡ್ ಬದಲಾವಣೆ ಮಾಡಿದರೆ ನಾನು ಸಿದ್ಧ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು, ಇರುವ ಗೊಂದಲ ನಿವಾರಣೆಯಾಗಬೇಕು. ದೆಹಲಿಗೆ ಹೋಗಿರುವವರನ್ನು ಸಮಾಧಾನ ಮಾಡಬೇಕಾಗಿದೆ. ದಕ್ಷಿಣ ಭಾರತದ ಭೀಷ್ಮರಾಗಿರುವ ಯಡಿಯೂರಪ್ಪ ಮುಂದಾಳತ್ವ ತೆಗೆದುಕೊಳ್ಳಬೇಕಾಗಿದೆ. ವಿಜಯೇಂದ್ರ ಅವರು ಹೊಸದಾಗಿ ಅಧ್ಯಕ್ಷರಾಗಿದ್ದು, ಅನುಭವದ ಕೊರತೆಯಾಗಿದೆ. ಈ ಹಿನ್ನೆಲೆ ಯಡಿಯೂರಪ್ಪ ಮುಂದೆ ಬರಬೇಕು ಎಂದರು. ಇದನ್ನೂ ಓದಿ: ಫೆ.10ಕ್ಕೆ ಬಿಜೆಪಿ ಲಿಂಗಾಯತ ರೆಬೆಲ್ ನಾಯಕರ ಸಭೆ? – ಬೊಮ್ಮಾಯಿ ನೇತೃತ್ವದಲ್ಲಿ ಮೀಟಿಂಗ್
Advertisement
Advertisement
ಜನಾರ್ದನ ರೆಡ್ದಿ ಬಂದ ಮೇಲೆ ಒಬ್ಬಂಟಿಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯ ಬೇರೆ, ವೈಯಕ್ತಿಕ ಜೀವನವೇ ಬೇರೆ. ಈಗಾಗಲೇ ಇದರ ಬಗ್ಗೆ ಮಾತನಾಡಿರುವೆ. ಪದೇ ಪದೇ ಮಾತನಾಡುವುದು ಬೇಡ. ಕೋಲಾರ ಕಾಂಗ್ರೆಸ್ ನವರು ಸಂಪರ್ಕ ಮಾಡಿರುವ ಕುರಿತು ಮಾತನಾಡಿ, ಅಭಿಮಾನದಿಂದ ಮತ್ತು ನಮ್ಮ ಸಂಘಟನೆ ನೋಡಿ ಕರೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 104 ಭಾರತೀಯರು ವಾಪಸ್