ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಹೌದು. ನಗರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ನಿಖಿಲ್, ಲೋಕಸಭೆಗೆ ನಾನು ಸ್ಪರ್ಧಿಸಲು ಸಿದ್ಧ ಎಂದು ತಂದೆ ಮುಂದೆಯೇ ಹೇಳಿಕೆ ನೀಡಿದ್ದಾರೆ.
Advertisement
ನಾನು ರಾಜಕೀಯದಲ್ಲಿ ಈಗ ಕಣ್ಣು ಬಿಡುತ್ತಿದ್ದೇನೆ. ಆದ್ರೆ ನಿಮ್ಮ ಸೇವೆಗೆ ಅವಕಾಶ ಕೊಡಿ ಎಂದು ಕೇಳಿಕೊಳ್ಳುವ ಮೂಲಕ ರಾಜಕಾರಣಕ್ಕೆ ಧುಮುಕುವ ಬಗ್ಗೆ ಸುಳಿವು ನೀಡಿದ್ದಾರೆ. ಇಷ್ಟು ದಿನ ಮಂಡ್ಯದಿಂದ ನಿಖಿಲ್ ಸ್ಪರ್ಧೆ ಬಗ್ಗೆ ಚರ್ಚೆಗಳಾಗ್ತಿದ್ದು ಇದೀಗ ಮೈಸೂರಿನಿಂದ ಸ್ಪರ್ಧಿಸ್ತಾರಾ ಅನ್ನೋ ಚರ್ಚೆ ಎದ್ದಿದೆ.
Advertisement
Advertisement
ಒಟ್ಟಿನಲ್ಲಿ ಈ ಮೂಲಕ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರದ್ದು ಅಪ್ಪ ಮಕ್ಕಳ ಪಕ್ಷ ಅನ್ನೋ ಟೀಕೆ ಬೆನ್ನಲ್ಲೇ ಇದೀಗ ವಂಶಪಾರಂಪರ್ಯದ ರಾಜಕಾರಣಕ್ಕೆ ಸಿಎಂ ಕುಮಾರಸ್ವಾಮಿ ಇಂಬು ಕೊಡ್ತಿದ್ದಾರಾ ಅನ್ನೋ ಪ್ರಶ್ನೆ ಎದ್ದಿದೆ.
Advertisement
ಮೈಸೂರಿನ ಟಿ.ನರಸೀಪುರದ ಮೂಗೂರಿನಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ತ್ರಿಪುರ ಸುಂದರಿ ಅಮ್ಮನ ದೇವಾಲಯದ ಅಭಿವೃದ್ಧಿಗೆ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಇಡೀ ದೇವಾಲಯದ ಸಮಗ್ರ ಅಭಿವೃದ್ಧಿಯಾಗಬೇಕು. ತಾಯಿಯ ಆರ್ಶೀವಾದ ಇದ್ದರೆ ರಾಜ್ಯದಲ್ಲಿ ಮಳೆ ಬೆಳೆಯಾಗುತ್ತದೆ. ನನಗಾಗಿ ಏನೂ ಬೇಡಿಕೊಂಡಿಲ್ಲ. ನನ್ನಿಂದ ಈ ರಾಜ್ಯದ ಜನರ ಕಷ್ಟಗಳನ್ನ ಪರಿಹರಿಸುವಂತೆ ಬೇಡಿಕೊಂಡಿದ್ದೇನೆ ಎಂದರು.
ಮೈತ್ರಿ ಸರ್ಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕು. ರೈತರು ಆತ್ಮಹತ್ಯೆಗೆ ಮುಂದಾಗಬಾರದು. ಯಾವುದೇ ಸಮಸ್ಯೆಗಳನ್ನು ಒಂದೇ ರಾತ್ರಿಗೆ ಬದಲಾಯಿಸಲು ಸಾಧ್ಯವಿಲ್ಲ. ಹೀಗಾಗಿ ಸ್ವಲ್ಪ ಸಮಯದಲ್ಲಿ ಎಲ್ಲವೂ ಬದಲಾವಣೆಯಾಗಲಿದೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv