Districts
ಯಡಿಯೂರಪ್ಪ ವಿರುದ್ಧ ಸ್ಪರ್ಧೆಗೆ ನಾನು ಸಿದ್ಧ: ವರ್ತೂರ್ ಪ್ರಕಾಶ್

ರಾಯಚೂರು: ಉತ್ತರ ಕರ್ನಾಟಕದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಎಲ್ಲೇ ಸ್ಪರ್ಧಿಸಿದರೂ ಅವರ ವಿರುದ್ಧ ಎದುರಾಳಿಯಾಗಿ ಸ್ಪರ್ಧಿಸುತ್ತೇನೆ ಎಂದು ಕೋಲಾರದ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಹೇಳಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತನಗೆ ಟಿಕೆಟ್ ಕೊಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಆಶ್ವಾಸನೆಯನ್ನು ನೀಡಿದ್ದಾರೆ ಎಂದು ಶಾಸಕ ವರ್ತೂರ್ ಪ್ರಕಾಶ ಹೇಳಿದ್ದಾರೆ.
ರಾಯಚೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ಪ್ರಕಾಶ್, ಯಡಿಯೂರಪ್ಪನವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರು ಅಲ್ಲಿ ಲಿಂಗಾಯತ ಮತಗಳ 50 ಸಾವಿರದಿಂದ ಶುರವಾಗುತ್ತದೆ. ನಮ್ಮ ಅಹಿಂದ ಸಮುದಾಯದ ಮತಗಳು 75%ರಷ್ಟಿದ್ದು ಅದರಿಂದ ನಮ್ಮ ಗೆಲುವು ಸುಲಭಸಾಧ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಂದಿನ ಅವಧಿಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಅವರೆ ಸಿಎಂ ಆಗಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೂ ಸಿದ್ದರಾಮಯ್ಯನವರಿಗೂ ಯಾವ ಸಂಬಂಧವಿಲ್ಲ. ಬುದ್ಧಿವಂತ ಸಮಾಜದವರು ತಾವೇ ಬೀದಿಗಿಳಿದು ಹೋರಾಟ ನಡೆಸಿದ್ದಾರೆ ಎಂದರು.
ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿರುವುದನ್ನ ಲಾಲಿಪಪ್‍ಗೆ ಹೋಲಿಸಿರುವ ಕೇಂದ್ರ ಸಚಿವ ಜಾವೇಡಕರ್ ಗೆ ಸವಾಲು ಎಸೆದ ಶಾಸಕರು, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲಮನ್ನಾ ಮಾಡಿ ಬಿರಿಯಾನಿ ಕೊಡಿಸಲಿ ಅಂತ ಹೇಳಿದರು.
