ಮಂಡ್ಯ: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ಅಲ್ಲದೇ ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೂಡ ನಾನು ಸಿದ್ಧ ಎಂದು ಸಾರಿಗೆ ಸಚಿವ ರೇವಣ್ಣ ಅವರು ಹೇಳಿದ್ದಾರೆ.
ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿಖಿಲ್ ಕುಮಾರಸ್ವಾಮಿ ಸೋಲಿನ ಹೊಣೆ ಹೊತ್ತ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಸೋಲಿನ ಹೊಣೆ ಹೊತ್ತುಕೊಂಡದ್ದು ಅವರ ದೊಡ್ಡ ಗುಣ, ಅದಕ್ಕೆ ಸೋಲಿನ ಹೊಣೆ ಅವರೇ ಹೊತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ, ಆತ್ಮಾವಲೋಕನ ಮಾಡಲು ಹೋಗಲ್ಲ. ಏಕೆಂದರೆ ರಮ್ಯಾ ಅವರು ಉಪಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಲ್ಲಿ ಇಪ್ಪತ್ತು ಸಾವಿರ ಲೀಡ್ ಪಡೆದಿದ್ದರು. ಆ ಸಂದರ್ಭದ ಅಂಶಗಳು ಚುನಾವಣೆ ಮೇಲೆ ಪ್ರಭಾವ ಬೀರುತ್ತವೆ ಅಷ್ಟೇ ಎಂದರು.
Advertisement
Advertisement
ಇದೇ ವೇಳೆ ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಮುಂದಾಗಿರುವುದಾಗಿ ತಿಳಿಸಿದ ಅವರು, ಒಳಚರಂಡಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ 196 ಕೋಟಿ ರೂ. ಹಾಗೂ ರಸ್ತೆ ಅಭಿವೃದ್ಧಿ ಹೊರತುಪಡಿಸಿ 111 ಕೋಟಿ ರೂ. ಬಿಡುಗಡೆಯಾಗಿದೆ ಎಂದರು. ಅಲ್ಲದೇ ರಾಜ್ಯ ಸರ್ಕಾರದ ಮುಂದೇ ಬಸ್ ಪ್ರಯಾಣ ದರ ಏರಿಕೆ ವಿಚಾರ ಇದ್ದು, ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನು ಓದಿ: ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ