ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಪಾಲನೆ ಆಗುತ್ತಿಲ್ಲ. ನಾನು ಸಿಎಂ ಕುರ್ಚಿಗೆ ಅಂಟಿಕೊಂಡಿಲ್ಲ, ನಾನು ಈಗಲೂ ರಾಜೀನಾಮೆಗೆ ಸಿದ್ಧ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರು ಬಹಿರಂಗ ಸಮಾವೇಶಗಳಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಕಳೆದ ಏಳು ತಿಂಗಳನಿಂದ ಸರ್ಕಾರ ನಿಷ್ಕ್ರೀಯವಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಕೆರಳಿರುವ ಸಿಎಂ ಹೊಸ ಬಾಂಬ್ ಸಿಡಿಸಿದ್ದಾರೆ.
Advertisement
#WATCH: Karnataka CM HD Kumaraswamy says "…If they want to continue with the same thing, I am ready to step down. They are crossing the line", when asked 'Congress MLAs are saying that Siddaramaiah is their CM'.' pic.twitter.com/qwErh4aEq4
— ANI (@ANI) January 28, 2019
Advertisement
ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲಾ ನಾಯಕರು ಸೇರಿಕೊಂಡು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ. ನಾನು ಮತ್ತು ಡಿಸಿಎಂ ಸೇರಿದಂತೆ ಸಂಪುಟದ ಸಚಿವರು ಕೆಲಸ ಮಾಡುತ್ತಿದ್ದಾರೆ. ಕೆಲವರಿಗೆ ನನ್ನ ಕಾರ್ಯವೈಖರಿ ಇಷ್ಟ ಆಗುತ್ತಿಲ್ಲ ಅಂದ್ರೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಆಂಗ್ಲ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
Advertisement
ಭಾನುವಾರ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಇದ್ದರೂ ಶಾಸಕರ ಹೇಳಿಕೆಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಇದೇ ರೀತಿ ಕೈ ಶಾಸಕರು ಪರೋಕ್ಷವಾಗಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
Advertisement
ಮುಖ್ಯಮಂತ್ರಿಯವರ ಈ ಹೇಳಿಕೆಗೆ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ…
Karnataka CM when asked 'Congress MLAs say Siddaramaiah is their leader': Congress leaders have to watch all that issues, I'm not the concerned person for it. If they want to continue with it,I'm ready to step down. They're crossing line…Congress leaders must control their MLAs pic.twitter.com/c1eD3TUas5
— ANI (@ANI) January 28, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv