ಬೆಂಗಳೂರು: ನಾನು ನಾಡಿನ ಆರು ಕೋಟಿ ಜನತೆಯ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿ ಇದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರ ಜೊತೆ ಮಾತನಾಡಿ ಅವರು, ಇದು ನನ್ನ ಸ್ವತಂತ್ರ ಸರ್ಕಾರ ಅಲ್ಲ, ನಾನು ನಿಮ್ಮ ಮುಲಾಜಿನಲ್ಲಿಯೇ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದು ಜನತೆಗೆ ಕೇಳಿಗೆ ಕೊಂಡಿದ್ದೆ. ಆದರೆ ಜನತೆ ತಿರಸ್ಕಾರ ಮಾಡಿದ್ದರು ಎಂದು ಹೇಳಿದ್ದಾರೆ
Advertisement
ರೈತರ ಸಾಲಮನ್ನಾ ಮಾಡಿ, ಇಲ್ಲದಿದ್ದರೇ ರಾಜೀನಾಮೆ ನೀಡಿ ಎಂದು ಯಾರು ಒತ್ತಾಯ ಮಾಡುವ ಅಗತ್ಯವಿಲ್ಲ. ಮಾತಿಗೆ ತಪ್ಪಿನಡೆದರೆ ನಾನೇ ರಾಜೀನಾಮೆ ನೀಡುತ್ತೇನೆ. ನನಗೆ ಸ್ವತಂತ್ರ ಬೆಂಬಲವಿಲ್ಲ, ಹೀಗಾಗಿ ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿ ಇರುವೆ, ಸಾಲಮನ್ನಾ ಕುರಿತು ಚರ್ಚೆ ಮಾಡಲಾಗುತ್ತಿದೆ. ಒಂದು ವಾರ ಕಾಲಾವಕಾಶ ನೀಡಿ, ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
Advertisement
ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಹುಮತ ಸಿಗದಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಹಾಗೂ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದರು. ಮಾತಿಗೆ ತಕ್ಕಂತೆ ನಡೆದುಕೊಳ್ಳಲಿ, ರೈತರ ಸಾಲಮನ್ನಾ ವಿಷಯಕ್ಕೆ ರಾಜೀನಾಮೆ ನೀಡುವಂತೆ ಹೇಳಬೇಕಾಗಿಲ್ಲ ಎಂದು ಹೇಳಿದ್ದಾರೆ.
Advertisement
ಸಂಘಟನೆಗಳ ಉದ್ದೇಶ ನಾಡಿನ ಅಭಿವೃದ್ಧಿಗೆ ಪೂರಕವಾಗಿರಬೇಕು. ಯಾವುದೇ ಜಾತಿಯ ವ್ಯಾವೋಹಕ್ಕೆ ಒಳಗಾಗಿ ನನ್ನ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ಕೆಟ್ಟ ಭಾವನೆ ಮೂಡಿಸುವ ಕೆಲಸ ಮಾಡಬೇಡಿ. ಚುನಾವಣೆ ಸಂದರ್ಭದಲ್ಲಿ ಹಲವಾರು ರೈತ ಮುಖಂಡರ ಹೇಳಿಕೆಗಳನ್ನು ಕೇಳಿರುವೆ ಎಂದು ತಿಳಿಸಿದರು.