ಬೆಂಗಳೂರು: ರೇಷನ್ ಕಾರ್ಡ್ (Ration Card) ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ (Muniyappa) ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ (BPL Card) ರದ್ದತಿಗೆ ಸಂಬಂಧಿಸಿದಂತೆ ಎದ್ದ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಕರೆದಿದ್ದರು. ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಪೇಚಾಡಿದರು.
Advertisement
Advertisement
7 ದಿನದೊಳಗೆ ಬಿಪಿಎಲ್ ಕಾರ್ಡ್ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ. ತೆರಿಗೆದಾರರು ಹಾಗೂ ಸರ್ಕಾರಿ ನೌಕರರ ಕಾರ್ಡ್ ರದ್ದು ಮಾಡಿದ್ದೇವೆ ಹೊರತು ಬೇರೆಯವರ ಕಾರ್ಡ್ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: PUBLiC TV Impact| ಸರ್ಕಾರಕ್ಕೆ ರೇಷನ್ ಕಾರ್ಡ್ ಪರಿಷ್ಕರಣೆ ವರದಿ ಸಲ್ಲಿಕೆ: ರದ್ದಿಗೆ ಮಾನದಂಡ ಏನು?
Advertisement
ಬಿಪಿಎಲ್‌ನಿಂದ ವಂಚಿತರಾಗಿರುವ ಅರ್ಹರು ಯಾರೇ ಇದ್ದರೂ ಒಂದು ವಾರದೊಳಗೆ ಅವರನ್ನೆಲ್ಲಾ ಬಿಪಿಎಲ್ ವ್ಯಾಪ್ತಿಗೆ ತಂದು ಸಮಸ್ಯೆಯನ್ನು ಸರಿಪಡಿಸುತ್ತೇವೆ. ಬಿಪಿಎಲ್‌ಗೆ ಅನರ್ಹರೆಂದು ಕಂಡು ಬಂದವರನ್ನು ಎಪಿಎಲ್‌ಗೆ ಸೇರಿಸಲಾಗಿದೆ. ಬಿಪಿಎಲ್‌ಗೆ ಅರ್ಹರಿದ್ದು ಎಪಿಎಲ್ ಗೆ ಸೇರಿಸಿದ್ದರೆ ಅವರನ್ನು ಪುನ: ಬಿಪಿಎಲ್‌ಗೆ ಸೇರಿಸುತ್ತೇವೆ ಎಂದರು.
Advertisement
ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಕ್ಕೆ ಪಬ್ಲಿಕ್ ಟಿವಿ ಒಂದು ವಾರದಿಂದ ನಿರಂತರವಾಗಿ ಸುದ್ದಿಯನ್ನು ಪ್ರಕಟಿಸುವ ಮೂಲಕ ಅಭಿಯಾನವನ್ನೇ ಕೈಗೊಂಡಿತ್ತು.