ಹಾಸನ: ತೀವ್ರ ಕುತೂಹಲ ಕೆರಳಿಸಿರುವ ಹಾಸನ (Hassan) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ (JDS) ಅಭ್ಯರ್ಥಿ ಯಾರು ಎಂಬ ಗೊಂದಲ ಮುಂದುವರಿದಿರುವಾಗಲೇ, ನಾನೇ ಅಭ್ಯರ್ಥಿ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ (Bhavani Revanna) ಹೇಳಿಕೊಂಡಿದ್ದಾರೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಜೆಡಿಎಸ್ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ ಎಂದಿದ್ದಾರೆ.
Advertisement
Advertisement
ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ಮೊಂಡಾಟ- ಅನಾಹುತ ಆಗಿದ್ರೂ ಕಳ್ಳ ಮಾರ್ಗದಲ್ಲಿ ಸೆಟ್ಲ್ಮೆಂಟ್!
Advertisement
Advertisement
ಮಾತಿನ ಆರಂಭದಲ್ಲಿ ಗ್ರಾಮಕ್ಕೆ ಈ ಹಿಂದೆ ಮಾಜಿ ಸಚಿವ ರೇವಣ್ಣ ಅವರು ಮಾಡಿರುವ ಕೆಲಸ ಕಾರ್ಯಗಳನ್ನು ಪ್ರಸ್ತಾಪಿಸಿರುವ ಭವಾನಿ, ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ನಮ್ಮ ಕೈತಪ್ಪಿ ಹೋಗಿದ್ದರಿಂದ ಅನೇಕ ಕೆಲಸ ಕಾರ್ಯಗಳು ಹಾಗೆಯೇ ಉಳಿದಿವೆ. ಅವುಗಳನ್ನು ಪೂರ್ಣಗೊಳಿಸಬೇಕಿದೆ. ಮುಂದಿನ 90 ದಿನಗಳಲ್ಲಿ ಚುನಾವಣೆ ಮುಗಿದು ಹೋಗಲಿದ್ದು, ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಇದನ್ನೂ ಓದಿ: ಆವರಣದಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣ- ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್ಲೈನ್ಸ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k