ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರಕ್ಕೆ ನಾನೇ ಟ್ರಬಲ್ ಶೂಟರ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರಕ್ಕೆ ನಾನೇ ಟ್ರಬಲ್ ಶೂಟರ್ ಆಗಿದ್ದೇನೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಸರ್ಕಾರ ಅಸ್ತಿರಗೊಳಲಿಸೋ ಪ್ರಯತ್ನ ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ. ಯಾವೊಬ್ಬ ಶಾಸಕರೂ ಸಹ ಸರ್ಕಾರವನ್ನು ಅಸ್ಥಿರಗೊಳಿಸಲು ಕೈ ಹಾಕಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜ್ಯಾದ್ಯಂತ ಸಮಿಶ್ರ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಸಾಲ ಮನ್ನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸರ್ಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ. ಅಗತ್ಯ ಬಿದ್ದಾಗ ಮಾತ್ರ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಅಕ್ಟೋಬರ್ 3 ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಅಲ್ಲದೇ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆಯ ವಿಚಾರ ನ್ಯಾಯಲಯದಲ್ಲಿದೆ. ಕೋರ್ಟ್ ಆದೇಶದ ಬಳಿಕ ಮೇಯರ್ ಹಾಗೂ ಉಪಮೇಯರ್ ಆಯ್ಕೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv