– ನನಗೆ ದೆಹಲಿಯಿಂದ ಮಾಹಿತಿ ದೊರಕಿದೆ
ಬೆಂಗಳೂರು: ಉಪಚುನಾವಣೆಯ ನಂತರ ಯಡಿಯೂರಪ್ಪ ಅವರು ಬದಲಾಗುತ್ತಾರೆಯೆಂದು ನನಗೆ ಬಹಳ ವಿಶ್ವಾಸವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ ಎಂದು ಟ್ವೀಟ್ನಲ್ಲಿ ಬರೆದಿದ್ದಾರೆ.
Advertisement
ದೆಹಲಿಯಿಂದ ನನಗೆ ದೊರೆತಿರುವ ಮಾಹಿತಿ ಪ್ರಕಾರ ಉಪಚುನಾವಣೆ ನಂತರ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. I am very confident ಯಡಿಯೂರಪ್ಪ ಬದಲಾಗ್ತಾರೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ, ಇದರ ಜೊತೆಗೆ ಬೇರೆ ಹಲವು ಕಾರಣಗಳೂ ಇವೆ. 1/3#Mysuru
— Siddaramaiah (@siddaramaiah) November 4, 2020
Advertisement
ಇದರ ಜೊತೆಗೆ ಶಿರಾ ಹಾಗೂ ಆರ್.ಆರ್ ನಗರ ಎರಡೂ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ರಾಜ್ಯಾದ್ಯಂತ ಆಡಳಿತ ವಿರೋಧಿ ಅಲೆಯಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಕಾನೂನುಗಳಿಂದ ಜನ ಬೇಸತ್ತಿದ್ದಾರೆ. ಅವೆಲ್ಲಾ ಕಾಂಗ್ರೆಸ್ ಮತಗಳಾಗಿ ಪರಿವರ್ತನೆಯಾಗಿವೆ ಎಂದು ಟ್ವೀಟ್ ಮಾಡಿ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
ಶಿರಾ ಹಾಗೂ ಆರ್.ಆರ್ ನಗರ ಎರಡೂ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ರಾಜ್ಯಾದ್ಯಂತ ಆಡಳಿತ ವಿರೋಧಿ ಅಲೆಯಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಕಾನೂನುಗಳಿಂದ ಜನ ಬೇಸತ್ತಿದ್ದಾರೆ. ಅವೆಲ್ಲಾ ಕಾಂಗ್ರೆಸ್ ಮತಗಳಾಗಿ ಪರಿವರ್ತನೆಯಾಗಿವೆ. 3/3#Mysuru
— Siddaramaiah (@siddaramaiah) November 4, 2020
Advertisement
ಜೊತೆಗೆ ರಾಜ್ಯ ಸಂಪೂರ್ಣ ಕೊರೊನಾ ಮುಕ್ತವಾಗುವವರೆಗೆ ಶಾಲೆ ಆರಂಭಿಸುವುದು ಬೇಡ. ಈ ವರ್ಷ ಎಲ್ಲಾ ತರಗತಿಗಳಿಗೆ ಆನ್ಲೈನ್ ಮೂಲಕ ಪಾಠ ಮಾಡಿ, ಎಲ್ಲರನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಿ. ಸರ್ಕಾರ ಶಾಲೆ ತೆರೆಯುವ ದುಸ್ಸಾಹಸ ಮಾಡುವುದು ಬೇಡ ಎಂದು ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.
ರಾಜ್ಯ ಸಂಪೂರ್ಣ ಕೊರೊನಾ ಮುಕ್ತವಾಗುವವರೆಗೆ ಶಾಲೆ ಆರಂಭಿಸುವುದು ಬೇಡ. ಈ ವರ್ಷ ಎಲ್ಲಾ ತರಗತಿಗಳಿಗೆ ಆನ್ಲೈನ್ ಮೂಲಕ ಪಾಠ ಮಾಡಿ, ಎಲ್ಲರನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಿ. ಸರ್ಕಾರ ಶಾಲೆ ತೆರೆಯುವ ದುಸ್ಸಾಹಸ ಮಾಡುವುದು ಬೇಡ. 2/3#Mysuru
— Siddaramaiah (@siddaramaiah) November 4, 2020