ಧಾರವಾಡ: ನಟ, ನಿರ್ದೇಶಕ ದ್ವಾರಕೀಶ್ ಅವರ ನಿಧನ ಬಹಳ ದುಃಖ ತರಿಸಿದೆ. ಅವರು, ನಾನು ಸೇರಿ ಸಿನಿಮಾ ಮಾಡಬೇಕು ಎಂದುಕೊಂಡಿದ್ದೆವು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ (Santhosh Lad) ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ದ್ವಾರಕೀಶ್ ಅವರ ನಿಧನ ಸುದ್ದಿ ಬಹಳ ಆಘಾತಕಾರಿ. ಅವರು ನಟ, ನಿರ್ದೇಶಕರಾಗಿ ಕೆಲಸ ಮಾಡಿದವರು. ದ್ವಾರಕೀಶ್ ಅವರು ನನಗೆ ಬಹಳ ಹತ್ತಿರದ ಪರಿಚಯ. ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರು ತಮ್ಮದೇ ಕೊಡುಗೆ ನೀಡಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗಕ್ಕೆ ದೊಡ್ಡ ನಷ್ಟ ಉಂಟು ಮಾಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದರು.
ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkish) ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ