ಹುಬ್ಬಳ್ಳಿ: ಶಿಗ್ಗಾಂವಿ (Shiggaon) ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ, ಸ್ವೀಕಾರ ಮಾಡ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್‌ಗೆ (Yasir Khan Pathan) ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವಂತಹ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್ ಪಕ್ಷದವರು ವಿಪರೀತ ಹಣದ ಹೊಳೆಯನ್ನು ಎರಡು ದಿನ ಹರಿಸಿ ಇಂದು ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಶಾಸಕರು ಜನ ಆಯ್ಕೆ ಮಾಡಿದ್ದಾರೆ. ನಾವು ಶಿಗ್ಗಾಂವಿ, ಸವಣೂರು (Savanuru) ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಆ ಅಭಿವೃದ್ಧಿ ಪರ್ವ ಹಾಗೆ ಮುಂದುವರೆಯಲಿ ಎಂದು ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ ಎಂದು ಬಯಸುತ್ತೇನೆ. 10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು ಬಂದಿದ್ದರು. ಸರ್ಕಾರದ ಯಂತ್ರ, ಹಣದಿಂದ ಅವರು ಗೆದ್ದಿದ್ದಾರೆ ಎಂದರು. ಇದನ್ನೂ ಓದಿ: ನನ್ನಂಥ ಮುಸ್ಲಿಂ ಸಮುದಾಯದ ಬಡ ವ್ಯಕ್ತಿಯನ್ನು ಗೆಲ್ಲಿಸಿದ್ದಾರೆ: ಯಾಸಿರ್ ಪಠಾಣ್
Advertisement
Advertisement
ಮಹಾರಾಷ್ಟ್ರದಲ್ಲಿ (Maharashtra) ನಿರೀಕ್ಷೆಯಂತೆ ಮುನ್ನಡೆಯಲ್ಲಿ ಗೆಲ್ಲುತ್ತಾ ಇದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ಹಾಗೂ ಮೂರು ಪಕ್ಷದ ಒಗ್ಗಟ್ಟಿನಿಂದ ಕಳೆದ ಮೂರು ವರ್ಷದ ಸರ್ಕಾರದ ಅಭಿವೃದ್ಧಿ ಮೇಲೆ ಜಯ ಸಿಕ್ಕಿದೆ. ಲೋಕಸಭಾ ನಂತರ ನರೇಂದ್ರ ಮೋದಿಯವರ ಪರ ಜನ ನಿಂತಿರೋದು ಗೊತ್ತಾಗುತ್ತಿದೆ. ವಿರೋಧ ಪಕ್ಷದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಸೀಟು ಹೆಚ್ಚಿಸಿ ಬೀಗುತ್ತಿದ್ದರೋ ಅವರಿಗೆ ಅವರ ಸ್ಥಾನವನ್ನು ಮಹಾರಾಷ್ಟ್ರದ ಜನ ತೋರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? – ದೇವೇಂದ್ರ ಫಡ್ನವಿಸ್ ಹೇಳಿದ್ದೇನು?
Advertisement
Advertisement
ಶಿಗ್ಗಾಂವಿಯಲ್ಲಿ ಲೋಕಸಭಾ ಚುನಾವಣೆ ನಂತರ ನಾವು ಚೆನ್ನಾಗಿ ಕೆಲಸ ಮಾಡಿದ್ದೇವೆ. ಆದರೆ ಇಡೀ ಸರ್ಕಾರನೇ ಬಂತು, ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಸರ್ಕಾರಕ್ಕೆ ಅನುಕೂಲ ಇರುತ್ತದೆ. ನಾವು ಕೂಡ ಒಂದು ಕಾಲದಲ್ಲಿ 17 ಬೈಎಲೆಕ್ಷನ್‌ನಲ್ಲಿ 13ನ್ನು ಗೆದ್ದಿದ್ದೆವು. ಸರ್ಕಾರದ ಕೆಲಸದ ಮೇಲೆ ವೋಟ್ ಬರುತ್ತೆ ಎಂದೇನಿಲ್ಲ. ನಾವು ಅಷ್ಟು ಗೆದ್ದು ನಂತರ ಸರ್ಕಾರ ಕಳೆದುಕೊಂಡಿದ್ದೆವು. ಅದಕ್ಕೆ ಕಾಂಗ್ರೆಸ್ (Congress) ಸರ್ಕಾರ ಒಂದುವರೆ ವರ್ಷದ ಆಡಳಿತಕ್ಕೆ ಪ್ರಮಾಣ ಪತ್ರ ಎಂದು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ