ನಾನು ಕುಮಾರಸ್ವಾಮಿಗೆ ಫೋನ್ ಮಾಡಿ ಬೆಂಬಲ ಕೊಡುವಂತೆ ಕೇಳಿದ್ದೇನೆ: ಬಿ.ಎಸ್ ಯಡಿಯೂರಪ್ಪ

Advertisements

ಬೆಂಗಳೂರು: ನಾನು ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಬೆಂಬಲ ಕೇಳಿದ್ದೇನೆ ಎಮದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

Advertisements

ಇಂದಿನಿಂದ ಆರು ದಿನಗಳ ಕಾಲ ಯಡಿಯೂರಪ್ಪ ಪ್ರವಾಸದಲ್ಲಿರುವ ಬಿಎಸ್‍ವೈ, ದಾವಣಗೆರೆಯಲ್ಲಿ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದರು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಸಂಬಂಧ ನಾನು ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಬೆಂಬಲ ಕೊಡುವಂತೆ ಕೇಳಿದ್ದೇನೆ. ಇಂದು ಕುಮಾರಸ್ವಾಮಿ ಅವರು ಸುದ್ದಿಗೋಷ್ಟಿ ನಡೆಸಿ ಹೇಳ್ತಾರೆ. ಬಹುತೇಕ ಬಿಜೆಪಿಗೆ ಜೆಡಿಎಸ್ ಬೆಂಬಲ ಸಿಗುತ್ತೆ. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ವೋ ಅಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

Advertisements

ಪರಿಷತ್ ಚುನಾವಣೆಗೆ ಎರಡನೇ ಸುತ್ತಿನ ಪ್ರಚಾರ ಶುರು ಮಾಡಿದ್ದೀನಿ. ಪರಿಷತ್ ಚುನಾವಣೆಯಲ್ಲಿ ಸ್ಪಷ್ಟವಾಗಿ ನಾವು ಗೆಲ್ತೇವೆ. ಗ್ರಾಮೀಣ ಪ್ರದೇಶಗಳಲ್ಲಿ ಬಿಜೆಪಿ ಪರ ಜನ ಇದ್ದಾರೆ. ಕಾಂಗ್ರೆಸ್ಸಿನವರು ಹಗುರವಾಗಿ ಮಾತಾಡ್ತಿದ್ದಾರೆ. ಅವರ ಹಗುರ ಮಾತುಗಳಿಗೆ ಚುನಾವಣೆಯಲ್ಲಿ ಜನ ಉತ್ತರ ಕೊಡ್ತಾರೆ. ನಾನು ಅದರ ಬಗ್ಗೆ ಏನೂ ಹೇಳಲ್ಲ ಎಂದರು. ಇದನ್ನೂ ಓದಿ: ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO

ಇದೇ ವೇಳೆ ಬಿ.ವೈ ವಿಜಯೇಂದ್ರಗೆ ಸಚಿವ ಸ್ಥಾನ ವಿಚಾರದ ಕುರಿತು ಪ್ರತಿಕ್ರಿಯಿಸಿ, ಸಚಿವ ಸ್ಥಾನದ ಬಗ್ಗೆ ನಾನು ಏನೂ ಮಾತಾಡಲ್ಲ. ಸಚಿವ ಸ್ಥಾನ ಕೊಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಕೇಂದ್ರದ ನಾಯಕರಿಗೆ, ಸಿಎಂಗೆ ಬಿಟ್ಟ ವಿಚಾರ ಅದು. ಅದರ ಬಗ್ಗೆ ನಾನು ಏನೂ ಹೇಳಲ್ಲ ಎಂದರು. ಇದನ್ನೂ ಓದಿ: ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

Advertisements

Advertisements
Exit mobile version