Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಣರಂಗವನ್ನ ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳ ವಿರುದ್ಧ ಸಿಎಂ ಸಮರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಣರಂಗವನ್ನ ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳ ವಿರುದ್ಧ ಸಿಎಂ ಸಮರ

Bengaluru City

ರಣರಂಗವನ್ನ ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳ ವಿರುದ್ಧ ಸಿಎಂ ಸಮರ

Public TV
Last updated: February 21, 2026 11:53 am
Public TV
Share
3 Min Read
Siddaramaiah 15
SHARE

– 4 ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ

ಬೆಂಗಳೂರು: ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ರಾಜಕೀಯ ವಿರೋಧಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಸಮರ ಸಾರಿದ್ದಾರೆ.

ಸಾಮಾಜಿಕ ದಿನದ ಪ್ರಯುಕ್ತ ಎಕ್ಸ್‌ನಲ್ಲಿ ಅಂಕಣ ಪೋಸ್ಟ್ ಮಾಡಿರುವ ಸಿಎಂ, ಕುರ್ಚಿ ಕಿತ್ತಾಟದ ನಡುವೆ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ. ಸದ್ಯ ಸಿಎಂ ಪೋಸ್ಟ್ ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ: `ಫ್ರೀ ಅಂತಾ ಊರೂರು ಸುತ್ತುತ್ತೀರಾ’ – ಹೆಚ್ಚಿನ ಮಹಿಳಾ ಪ್ರಯಾಣಿಕರ ಕಂಡು ಕಂಡಕ್ಟರ್ ಕಿರಿಕ್

“ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವ ವರೆಗೆ ಹೋರಾಡುತ್ತೇನೆ”

ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ… pic.twitter.com/rA8XGFuuZL

— Siddaramaiah (@siddaramaiah) February 20, 2026

ಪೋಸ್ಟ್‌ನಲ್ಲಿ ಏನಿದೆ?
ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವ ವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ. ಅದು ಕಲ್ಲು-ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ. ಇದನ್ನೂ ಓದಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ. ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ. ಇದನ್ನೂ ಓದಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

ಅವಕಾಶ ವಂಚಿತರ ಪರ ನಿಂತವರನ್ನು ವರ್ತಮಾನವು ಕ್ರೂರವಾಗಿ ನಡೆಸಿಕೊಂಡಿದೆ. ಸಾಮಾಜಿಕ ನ್ಯಾಯದ ಬಂಡಿಯನ್ನು ಮುಂದಕ್ಕೆ ಎಳೆದುಕೊಂಡು ಹೋಗುವುದು ಸುಲಭದ ಕೆಲಸ ಅಲ್ಲ ಎನ್ನುವುದನ್ನು ನಾನು ಅನುಭವದ ಮೂಲಕ ಅರಿತುಕೊಂಡಿದ್ದೇನೆ. ಈ ಪ್ರಯತ್ನ ನಡೆಸಿದವರೆಲ್ಲರನ್ನು ವರ್ತಮಾನ ಬಹಳ ಕ್ರೂರವಾಗಿ ನಡೆಸಿಕೊಂಡಿದೆ. ನಾನು ಸಾಮಾಜಿಕ ನ್ಯಾಯದ ಪರವಾಗಿ ದನಿ ಎತ್ತುವ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನವನ್ನು ಮಾಡಿದಾಗೆಲ್ಲ ನನ್ನ ವಿರುದ್ಧ ದಾಳಿಗಳು ನಡೆದಿವೆ. ಇದು ಈಗಲೂ ಮುಂದುವರಿಯುತ್ತಿದೆ. ನನ್ನ ವಿರುದ್ಧ ಯಾಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವುದೂ ನನಗೆ ಗೊತ್ತಿದೆ. ಇದನ್ನೂ ಓದಿ: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

ನಾನು ಈ ರಾಜ್ಯದ ಬಡವರು, ಶೋಷಿತರು, ಅವಕಾಶ ವಂಚಿತರ ಪರವಾಗಿದ್ದೇನೆ, ಸಾಮಾಜಿಕ ನ್ಯಾಯದ ಪರವಾಗಿದ್ದೇನೆ, ಸಂವಿಧಾನದ ಪರವಾಗಿದ್ದೇನೆ, ಶೋಷಿತರ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದೇನೆ, ದುರ್ಬಲರಿಗೆ ಅನ್ಯಾಯವಾದಾಗ ದನಿ ಎತ್ತಿದ್ದೇನೆ. ಇದಕ್ಕಾಗಿ ರಾಜ್ಯದ ಜನತೆ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಇದು ನಮ್ಮ ರಾಜಕೀಯ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

TAGGED:bengalurubjpcongresspoliticssiddaramaiahಕಾಂಗ್ರೆಸ್ಬಿಜೆಪಿಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
7 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
15 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
24 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
30 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
57 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?