ದುಬೈ: ಟೀಂ ಇಂಡಿಯಾದ ರನ್ ಮಷಿನ್ ವಿರಾಟ್ ಕೊಹ್ಲಿ (Virat Kohli) ಅಪ್ಘಾನಿಸ್ತಾನದ (Afghanistan) ವಿರುದ್ಧ ನಡೆದ ಏಷ್ಯಾಕಪ್ ಅಂತಿಮ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಬಳಿಕ ಭಾವುಕರಾಗಿ ಮಾತನಾಡಿದ ವಿರಾಟ್ ಕೊಹ್ಲಿ, ಈ ಶತಕವನ್ನು ನನ್ನ ಪತ್ನಿ ಅನುಷ್ಕಾ (anushka sharma) ಹಾಗೂ ಪುತ್ರಿ ವಾಮಿಕಾಗೆ ಅರ್ಪಿಸುವೆ ಎಂದು ನುಡಿದಿದ್ದಾರೆ.
Advertisement
ಕ್ರಿಕೆಟ್ ಕಳೆದ ಎರಡೂವರೆ ವರ್ಷ ನನಗೆ ಹಲವು ಪಾಠಗಳನ್ನು ಕಲಿಸಿದೆ. ಟಿ20ಯಲ್ಲಿ ನನ್ನ ಶತಕದ ಬರ ನೀಗಲಿದೆ ಎಂದು ಭಾವಿಸಿರಲಿಲ್ಲ. ಕಠಿಣ ಸಮಯದಲ್ಲೂ ನನ್ನೊಂದಿಗೆ ನನ್ನ ತಂಡ ಸಹಕಾರಿಯಾಗಿ ನಿಂತಿದೆ. ಶತಕ ಬಾರಿಸುತ್ತಿಲ್ಲ ಎನ್ನುವ ಬಗ್ಗೆ ಹೊರಗೆ ಸಾಕಷ್ಟು ಚರ್ಚೆಯಾಗುತ್ತಿತ್ತು ಎಂದು ನನಗೆ ಗೊತ್ತು. ನಾನಿಲ್ಲಿ ಇಂದು ನಿಂತಿದ್ದೇನೆ ಎಂದರೆ ಅದಕ್ಕೆ ಒಬ್ಬ ವ್ಯಕ್ತಿ ಪ್ರಮುಖ ಕಾರಣ. ಅದು ನನ್ನ ಪತ್ನಿ ಅನುಷ್ಕಾ. ಈ ಶತಕ ಆಕೆ ಹಾಗೂ ನಮ್ಮ ಪುತ್ರಿ ವಾಮಿಕಾಗೆ ಅರ್ಪಿಸುತ್ತೇನೆ. ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಅನುಷ್ಕಾ ನನ್ನ ಜೊತೆಗಿದ್ದಾಳೆ. ಆಕೆಯಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ ಎಂದು ಕೊಹ್ಲಿ ಭಾವುಕರಾಗಿದ್ದಾರೆ. ಇದನ್ನೂ ಓದಿ: ಬೌಲರ್‌ಗೆ ಬ್ಯಾಟ್‍ನಲ್ಲಿ ಹೊಡೆಯಲು ಮುಂದಾದ ಆಸಿಫ್ ಅಲಿ – ಜೋರಾದ #BanAsifAli ಕೂಗು
Advertisement
Advertisement
ಕಿಂಗ್ ಕೊಹ್ಲಿ ಈಗ ಸಿಕ್ಸರ್ ವೀರ: 1,021 ದಿನಗಳ ಬಳಿಕ ಶತಕ ಸಿಡಿಸಿದ ವಿರಾಟ್ ಕೊಹ್ಲಿ 20 ಅಂತಾರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ ಸಿಕ್ಸರ್‌ಗಳ ಶತಕ ಬಾರಿಸಿದ ಸಾಧನೆಗೂ ಹೆಸರಾಗಿದ್ದಾರೆ. ಈ ಮೂಲಕ ಟ್ವೆಂಟಿ-20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಸಿಕ್ಸರ್ ಸಿಡಿಸಿದ ಭಾರತದ 2ನೇ ಹಾಗೂ ವಿಶ್ವದ ಟಾಪ್-10 ಆಟಗಾರರಲ್ಲಿ ಒಬ್ಬರಾಗಿದ್ದಾರೆ.
Advertisement
ಉತ್ತಮ ಬ್ಯಾಟಿಂಗ್ ಲಯಕ್ಕೆ ಮರಳಿರುವ ಕಿಂಗ್ ಕೊಹ್ಲಿ 104 ಪಂದ್ಯಗಳಲ್ಲಿ (96 ಇನ್ನಿಂಗ್ಸ್) 104 ಸಿಕ್ಸರ್ ಸಿಡಿಸಿದ್ದಾರೆ. ಇದನ್ನೂ ಓದಿ: 2 ವರ್ಷ 9 ತಿಂಗಳು 16 ದಿನಗಳ ಬಳಿಕ ಕೊಹ್ಲಿ ಶತಕ – ಟಿ20ಯಲ್ಲಿ ಚೊಚ್ಚಲ 100
The milestone we'd all been waiting for and here it is!
71st International Century for @imVkohli 🔥💥#AsiaCup2022 #INDvAFGpic.twitter.com/hnjA953zg9
— BCCI (@BCCI) September 8, 2022
ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಗಳಿಸಿರುವ ಬ್ಯಾಟರ್ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ ಮುಂಚೂಣಿಯಲ್ಲಿದ್ದಾರೆ. ಗಪ್ಟಿಲ್ ಒಟ್ಟು 121 ಪಂದ್ಯ (117 ಇನ್ನಿಂಗ್ಸ್)ಗಳಲ್ಲಿ 172 ಸಿಕ್ಸರ್ ಸಿಡಿಸಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohith Shrama) 136 ಪಂದ್ಯಗಳಲ್ಲಿ (128 ಇನ್ನಿಂಗ್ಸ್) 171 ಸಿಕ್ಸರ್ ಸಿಡಿಸಿ ವಿಶ್ವದ ಟಾಪ್ 2 ಹಾಗೂ ಭಾರತದ ಮೊದಲ ಆಟಗಾರರಾಗಿದ್ದಾರೆ. ನಂತರದಲ್ಲಿ ಕ್ರಿಸ್ ಗೇಲ್ 124 ಸಿಕ್ಸರ್, ಇಯಾನ್ ಮಾರ್ಗನ್ 120, ಆರನ್ ಫಿಂಚ್ 117, ಪಾಲ್ ಸ್ಟಿರ್ಲಿಂಗ್ 111, ಎವಿನ್ ಲೆವಿಸ್ 110, ಕಾಲಿನ್ ಮನ್ರೊ 107 ಸಿಕ್ಸರ್ ಸಿಡಿಸಿದ್ದಾರೆ. 104 ಪಂದ್ಯಗಳಲ್ಲಿ 104 ಸಿಕ್ಸರ್ ಸಿಡಿಸಿರುವ ವಿರಾಟ್ ಕೊಹ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪೈಕಿ ಭಾರತದ 2ನೇ ಹಾಗೂ ವಿಶ್ವದ 9ನೇ ಸ್ಥಾನದಲ್ಲಿದ್ದಾರೆ.