ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ನೀಡಿದ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಬಿಎಲ್ ಸಂತೋಷ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಜೀನ್ಸ್, ಡಿಎನ್‍ಎ ನೋಡಿ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಮಾಡುವುದಿಲ್ಲ ಎಂದು ಉತ್ತರಿಸಿದ್ದರು. ಸಂತೋಷ್ ಹೇಳಿಕೆಗೆ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮಗಳು ಕೇಳಿದ್ದಕ್ಕೆ, ನಾನು ಆ ಬಗ್ಗೆ ಯಾವುದೇ ರಿಯಾಕ್ಟ್ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
Advertisement
Advertisement
ತೇಜಸ್ವಿನಿ ಅನಂತಕುಮಾರ್ ಅವರ ಒಂದೇ ಹೆಸರನ್ನು ಆಯ್ಕೆ ಮಾಡಿ ಕಳುಹಿಸಲಾಗಿತ್ತು. ಅನಂತ್ ಕುಮಾರ್ ಅವರ ಸೇವೆಯನ್ನು ಯಾರು ಮರೆಯಲು ಸಾಧ್ಯವಿಲ್ಲ. ಯಾರೇ ದೆಹಲಿಗೆ ಹೋದರೂ ಅವರ ಕೆಲಸವನ್ನು ಅವರು ಮಾಡಿ ಕೊಡುತ್ತಿದ್ದರು. ಅನಿವಾರ್ಯ ಕಾರಣಕ್ಕೆ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಲಾಗಿದೆ. ತೇಜಸ್ವಿ ಸೂರ್ಯ ಅವರನ್ನು ಸಹ ದೊಡ್ಡ ಅಂತರದಲ್ಲಿ ಗೆಲ್ಲಿಸಲಾಗುವುದು ಎಂದು ಹೇಳಿದರು.
Advertisement
ತೇಜಸ್ವಿನಿ ಅನಂತಕುಮಾರ್ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ಚುನಾವಣೆಯಲ್ಲಿ ಎಲ್ಲರನ್ನು ಉಪಯೋಗಿಸಿಕೊಂಡು ಗೆಲುವು ಸಾಧಿಸಲಾಗುವುದು ಎಂದು ತಿಳಿಸಿದರು.
Advertisement
ನಮ್ಮ ಪಕ್ಷ ರಾಜ್ಯದಲ್ಲಿ 22 ಸ್ಥಾನಗಳನ್ನು ಗೆದ್ದ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ. ಈಗಲೇ ಕಾಂಗ್ರೆಸ್, ಜೆಡಿಎಸ್‍ನಲ್ಲಿ ಬಡಿದಾಟ ಆರಂಭವಾಗಿದೆ. ಬಿಜೆಪಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಬಿಎಸ್‍ವೈ ವಿಶ್ವಾಸ ವ್ಯಕ್ತಪಡಿಸಿದರು.