ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹೇಳಿದ್ದರು. ಕಾಂತಾರ (Kantara) ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಮಹತ್ವ ಪಡೆದುಕೊಂಡಿತ್ತು. ಈ ಮಾತಿಗೆ ವಿರೋಧ ಎನ್ನುವಂತೆ ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆ ನೀಡಿದ್ದರು. ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧಿಸಿದ್ದರು. ಈ ಕುರಿತು ಪರ ವಿರೋಧ ಚರ್ಚೆ ಕೂಡ ನಡೆದಿತ್ತು. ಇದಕ್ಕೆ ಚೇತನ್ (Chetan) ಮತ್ತೆ ಸ್ಪಷ್ಟನೆ ನೀಡಿದ್ದಾರೆ. ರಿಷಬ್ ಬಳಸಿದ ‘ಹಿಂದೂ ಸಂಸ್ಕೃತಿ’ ಪದಕ್ಕೆ ನನ್ನ ಆಕ್ಷೇಪಣೆ ಇದೆ ಎಂದಿದ್ದಾರೆ.
Advertisement
ಚೇತನ್ ಆಡಿದ ಮಾತುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗುತ್ತಿದ್ದಂತೆಯೇ ಅದಕ್ಕೆ ಸ್ಪಷ್ಟನೆ ಎನ್ನುವಂತೆ ಇಂದು ಮಾಧ್ಯಮ ಗೋಷ್ಠಿ ಕರೆದಿದ್ದರು ನಟ. ಅಲ್ಲಿಯೂ ತಾವಾಡಿದ ಮಾತಿಗೆ ಬದ್ಧರಾಗಿಯೇ ಮಾತನಾಡಿದರು. ಬುಡಕಟ್ಟು (Tribe) ನಮ್ಮ ಮೂಲ ಸಂಸ್ಕೃತಿ. ಇವರಿಗೆ 70 ಸಾವಿರ ವರ್ಷಕ್ಕೂ ಅಧಿಕ ಇತಿಹಾಸವಿದೆ. ಹಿಂದೂ ಧರ್ಮಕ್ಕೆ ಕೇವಲ ಮೂರುವರೆ ಸಾವಿರ ವರ್ಷ ಇತಿಹಾಸ. ದೈವಾರಾಧನೆ, ಭೂತಕೋಲ ಇವುಗಳು ಬುಡಕಟ್ಟು ಸಂಸ್ಕೃತಿಗಳು. ಅದು ಹೇಗೆ ಹಿಂದೂ ಸಂಸ್ಕೃತಿ (Hindu Culture) ಆಗುತ್ತವೆ? ಎಂದು ನಿರೂಪಿಸಿದರು. ದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್
Advertisement
Advertisement
ಕಾಂತಾರ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೇ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕೇವಲ ಸ್ಯಾಂಡಲ್ ವುಡ್‌ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, ‘ಕಾಂತಾರ’ದ ಕಾಂತಿಯಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ ‘ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅದೇ ಹೆಸರಿನಿಂದ ಕರೆಯುತ್ತಿದ್ದಾರೆ.
Advertisement
‘ಕಾಂತಾರ’ ಕುರಿತು ಪ್ರತಿಕ್ರಿಯಿಸಿದ್ದ ನಟ ಚೇತನ್ ಅಹಿಂಸಾ, ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅದು ವಿವಾದಕ್ಕೆ (Controversy) ಕಾರಣವಾಗಿತ್ತು.